ETV Bharat / state

ಅವಾಚ್ಯ ಶಬ್ದಗಳಿಂದ ಜೆಡಿಎಸ್​ ಶಾಸಕಿ ಕರೇಮ್ಮಗೆ ನಿಂದನೆ ಆರೋಪ: 8 ಜನರ ವಿರುದ್ಧ ಪ್ರಕರಣ ದಾಖಲು - ಈಟಿವಿ ಭಾರತ ಕನ್ನಡ

ಶಾಸಕಿ ಕರೇಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೆಡಿಎಸ್​ ಶಾಸಕಿ ಕರೇಮ್ಮಗೆ ನಿಂದನೆ ಆರೋಪ
ಜೆಡಿಎಸ್​ ಶಾಸಕಿ ಕರೇಮ್ಮಗೆ ನಿಂದನೆ ಆರೋಪ
author img

By

Published : Jun 6, 2023, 11:51 AM IST

ದೇವದುರ್ಗ: ಜೆಡಿಎಸ್ ಶಾಸಕಿ ಕರೇಮ್ಮ ನಾಯಕ್‌ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಕರ್ತವ್ಯ ನಿರತ ಲೈನ್‌ಮ್ಯಾನ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಘಟನೆ ನಂತರ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಟೈರ್ ಸುಟ್ಟು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಶಾಸಕಿ ಭೇಟಿ ನೀಡಿದ್ದಾರೆ.

ಈ ವೇಳೆ ಪ್ರತಿಭಟನಕಾರರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕೈ ಹಿಡಿದು ಎಳೆದಾಡಿ, ಬೆದರಿಕೆ ಹಾಕಿ ಜೆಡಿಎಸ್ ಕಾರ್ಯಕರ್ತರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಒಟ್ಟು 8 ಜನರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಾಸಕಿಗೆ ಬೆದರಿಕೆ ಹಾಕಿದ ಆರೋಪದಡಿ ​ ದೇವದುರ್ಗ ಪೊಲೀಸ್ ಠಾಣೆ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಭಾನುವಾರದಂದು ವಿದ್ಯುತ್ ಕಂಬದ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೆ ಲೈನ್‌ಮ್ಯಾನ್ ವೀರುಪಾಕ್ಷಿ (27) ಮೃತಪಟ್ಟಿದ್ದರು. ಸಿರವಾರ ತಾಲೂಕಿನ ಕವಿತಾಳ ಪಟ್ಟಣ ನಿವಾಸಿ ವಿರೂಪಾಕ್ಷಿ ಕರ್ತವ್ಯ ನಿಮಿತ್ತ ಕ್ಯಾದಿಗೇರಾ ಹಾಗೂ ಜಾಗಟಗಲ್ ನಡುವೆ ವಿದ್ಯುತ್ ಕಂಬ ದುರಸ್ತಿ ಕಾರ್ಯಕ್ಕೆ ಎಂದು ತೆರಳಿದ್ದರು. ಅರಕೇರಿ ತಾಲೂಕಿನ ಅರಕೇರಿ ಜೆಸ್ಕಾಂ‌ ಶಾಖೆಯ ಲೈನ್‌ಮ್ಯಾನ್​ ಆಗಿ ವಿರುಪಾಕ್ಷಿ ಕಾರ್ಯನಿರ್ವಹಿಸುತ್ತಿದ್ದರು.

ಕಲುಷಿತ ನೀರು ಸೇವಿಸಿ ವೃದ್ದೆ ಸಾವು, ಗಂಗಾವತಿ: ಇನ್ನು ಕಲುಷಿತ ನೀರು ಸೇವಿಸಿ ವೃದ್ಧೆ ಸಾವನ್ನಪ್ಪಿರುವ ಘಟನೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ನಡೆದಿದೆ. ಹೊನ್ನಮ್ಮ ಶಿವಪ್ಪ (65) ಎಂಬ ಮಹಿಳೆ ಸಾವನ್ನಪ್ಪಿದ್ದು, 15 ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಗಂಗಾವತಿಯ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ಹೊನ್ನಮ್ಮ ಅವರನ್ನು ಚಿಕಿತ್ಸೆಗಾಗಿ ಕನಕಗಿರಿಯ ಆಸ್ಪತ್ರೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಮೃತಪಟ್ಟಿದ್ದಾರೆ. ಇದಕ್ಕೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಅಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ. ಘಟನೆ ಬಗ್ಗೆ ತಕ್ಷಣವೇ ಗುರುತಿಸಿ ಆರಂಭದಲ್ಲಿಯೇ ಈ ಬಗ್ಗೆ ಪಂಚಾಯಿತಿ ಸಿಬ್ಬಂದಿ ನಿಗಾ ವಹಿಸಿದ್ದರೆ ಈ ಘಟನೆ ಸಂಭಿವಿಸುತ್ತಿರಲಿಲ್ಲ ಎನ್ನುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಹೈದರಾಬಾದ್ ಮೂಲದ ಯುವತಿ ಶವ ಪತ್ತೆ: ಪ್ರಿಯಕರ ನಾಪತ್ತೆ

ಅಲ್ಲದೇ ಜನ ಹೆಚ್ಚಿನ ಜನ ಅನಾರೋಗ್ಯಕ್ಕೀಡಾಗುವುದರಿಂದ ತಪ್ಪಿಸಬಹುದಿತ್ತು. ಈ ಬಗ್ಗೆ ಯುವಕರು ಪಂಚಾಯಿತಿ ಸಿಬ್ಬಂದಿಗಳ ಗಮನಕ್ಕೆ ತಂದರೂ ನಿರ್ಲಕ್ಷಯವಹಿಸಿದ್ದಾರೆ. ಇದಿರಂದ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥಗೊಂಡಿದ್ದಾರೆ ಎಂದು ಯುವಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಅಸ್ವಸ್ಥಗೊಂಡಿದ್ದ ಜನರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿಯೂ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಯುವಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ವೃದ್ಧೆ ಸಾವು: 15 ಜನ ಅಸ್ವಸ್ಥ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.