ರಾಯಚೂರು : ಜಿಲ್ಲೆಯ ಮುದಗಲ್ ಬಳಿಯ ಆದಾಪುರ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗಿ ಕುರಿ ಮೇಲೆ ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಆದಾಪುರ ಗ್ರಾಮದ ಹೊರವಲಯದಲ್ಲಿ ಗ್ರಾನೈಟ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ಹನುಮಪ್ಪ ಎನ್ನುವವರು ಕುರಿ ಮೇಯಿಸಲು ಹೋಗಿದ್ದಾಗ ಈ ವೇಳೆ ಕುರಿಯ ಮೇಲೆ ಏಕಾಏಕಿ ದಾಳಿ ನಡೆಸಿ ಅದನ್ನ ತಿನ್ನುತಿತ್ತು. ಆಗ ಸ್ಥಳದಲ್ಲಿನ ನಾಲ್ಕೈದು ಕುರಿಗಳು ದಾಳಿ ಮಾಡಿದಾಗ ಗಾಬರಿಗೊಂಡ ಚಿರತೆ ಸ್ಥಳದಿಂದ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡ ಕುರಿ ಸದ್ಯ ಪ್ರಾಣಾಪಾಯದಿಂದ ಪಾರಾರಿಯಾಗಿದೆ.
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆಯ ಹೆಜ್ಜೆಯ ಗುರುತು ಪತ್ತೆಯಾಗಿದ್ದು, ಬಳ್ಳಾರಿ ಜಿಲ್ಲೆಯಿಂದ ಚಿರತೆ ಬೋನ್ ತರಿಸಿ ಇರಿಸುವ ಮೂಲಕ ಚಿರತೆ ಸೆರೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಘಟನೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಗಾಬರಿಗೊಂಡಿದ್ದು, ಅದಷ್ಟು ಬೇಗನೆ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.