ರಾಯಚೂರು: ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬಾಲ ಕಾರ್ಮಿಕ ನಿರ್ಮೂಲನೆ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮಾನಿಟರಿಂಗ್ ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಕುರಿತು ಸಭೆ ನಡೆಯಿತು.
ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ನಿರ್ಮೂಲನೆಗೆ ಸಹಕರಿಸಬೇಕು ಎಂದರು. ಬಾಲಕಾರ್ಮಿಕ ಯೋಜನೆ ಸಮಿತಿಯಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದ್ದು, ಅದನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿಕೊಳ್ಳಬೇಕು ಎಂದರು.
ಶಾಲೆ ಬಿಟ್ಟ ಮಕ್ಕಳು, ಬಾಲ ಕಾರ್ಮಿಕ ತರಬೇತಿ ಕೆಂದ್ರಗಳ ಮಕ್ಕಳ ಶಿಕ್ಷಣ ಮಟ್ಟ, ಮಧ್ಯಾಹ್ನದ ಬಿಸಿಯೂಟ ಯೋಜನೆ ಇತರ ಯೋಜನೆಗಳ ಮೂಲಕ ಶಾಲೆಗೆ ಕರೆತರುವಂತೆ ಮಾಡಿ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರಯತ್ನ ತೊಡಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.