ರಾಯಚೂರು: ಕಿರಾಣಿ ಅಂಗಡಿ ಮೇಲೆ ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಬಾಲಕನೋರ್ವನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿನ ಮಲ್ಲಪ್ಪ ಉದ್ಬಾಳ ಎಂಬುವರ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕನನ್ನು ರಕ್ಷಿಸಲಾಗಿದ್ದು, ಅಂಗಡಿ ಮಾಲೀಕನ ವಿರುದ್ಧ ಮಸ್ಕಿ ಠಾಣೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 8ನೇ ತರಗತಿಗೆ ಸೇರಿಸಲಾಗಿದೆ.
ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಸ್ಕಿಯ ಶಿರಸ್ತೇದಾರ ಸೈಯದ್ ಅಕ್ತರ್, ಲಿಂಗಸೂಗೂರು ಕಾರ್ಮಿಕ ನಿರೀಕ್ಷಕ ಶಿವಶಂಕರ ತಳವಾರ, ಮಸ್ಕಿ ಕಂದಾಯ ನಿರೀಕ್ಷಕ ಶರಣಗೌಡ, ಶಿಕ್ಷಣ ಇಲಾಖೆಯ ಮಂಜುನಾಥ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ವ್ಯವಸ್ಥಾಪಕ ರವಿಕುಮಾರ ಇದ್ದರು.