ರಾಯಚೂರು: ಜ. 15ರೊಳಗೆ ಫಲಾನುಭವಿಗಳಿಗೆ ಪೌರತ್ವ ಪ್ರಮಾಣಪತ್ರ ನೀಡುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಆಹ್ವಾನಿಸಿ ಸಂಸದ ಸಂಗಣ್ಣ ಕರಡಿ ಪತ್ರ ಬರೆದಿದ್ದಾರೆ.
![KN_RCR_5_5_Raichur_CAA_Bangla_nivasigalige_pouratva_in wait_pm_modi_10017](https://etvbharatimages.akamaized.net/etvbharat/prod-images/5608478_th.jpg)
ಸಿಂಧನೂರು ತಾಲೂಕು ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಸಂಸದ ಸಂಗಣ್ಣ ಕರಡಿ ಜ. 15ರೊಳಗೆ ಬಾಂಗ್ಲಾ ವಲಸಿಗರಿಗೆ ಪೌರತ್ವ ಪ್ರಮಾಣಪತ್ರ ನೀಡಲು ಕಾರ್ಯಕ್ರಮ ನಿಗದಿಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಆಹ್ವಾನಿಸಿದ್ದಾರೆ.
ಇನ್ನು ಇಡೀ ದಕ್ಷಿಣ ಭಾರತದಲ್ಲಿಯೇ ಅಧಿಕ ಸಂಖ್ಯೆಯಲ್ಲಿ ಸಿಂಧನೂರು ತಾಲೂಕಿನ ಆರ್.ಹೆಚ್. ಕ್ಯಾಂಪ್ನಲ್ಲಿ ಬಾಂಗ್ಲಾ ವಲಸಿಗರು ವಾಸವಾಗಿದ್ದು, ಇವರು ಸಿಎಎ ಕಾಯ್ದೆಯಡಿ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ.