ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ ಹಾಳಾಜಾಡಲದಿನ್ನಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದ ದಿನದಂದೇ ಬುದ್ದಿನ್ನಿ ಗ್ರಾಮದ ಜನರ ಮೇಲೆ ಹಲ್ಲೆ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗಲಾಟೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರ ಜೀಪ್ನ್ನು ಅಡ್ಡಗಟ್ಟಿ ಮಹಿಳೆಯರು ಪ್ರತಿಭಟನೆ ನಡೆಸಿ ಹಲ್ಲೆ ನಡೆಸಿದವರನ್ನು ಹಿಡಿದು ತರುವಂತೆ ಒತ್ತಾಯಿಸಿದರು.