ರಾಯಚೂರು: ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಗಣೇಶ ಚತುರ್ಥಿ ಹಿನ್ನೆಲೆ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪಿಸಲಾಗಿತ್ತು. ಮೂರು ದಿನಗಳ ಬಳಿಕ ಗಣೇಶ ಮೂರ್ತಿಯನ್ನ ನಿಮಜ್ಜನ ಮಾಡಿ ವಾಪಸ್ ಬರುತ್ತಿರುವ ಗುಂಪು ಮತ್ತು ನಿಮಜ್ಜನಕ್ಕೆ ತೆರಳುತ್ತಿರುವ ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.
ಈ ಘಟನೆ ಸಂಬಂಧ ತುರುವಿಹಾಳ ಠಾಣೆಯಲ್ಲಿ ಎರಡು ಕೋಮಿನವರು ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು 7 ಜನರನ್ನ ಪೊಲೀಸರು ಬಂಧಿಸಿದ್ದು, ಉಳಿದವರನ್ನ ಬಂಧಿಸುವ ಕಾರ್ಯ ಮುಂದುವರೆದಿದೆ.
ಘಟನೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.