ರಾಯಚೂರು: ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ನಗರದ ಸ್ಟೇಶನ್ ರಸ್ತೆಯಲ್ಲಿರುವ ಫುಟ್ಪಾತ್ ಅಂಗಡಿಗಳನ್ನು ತೆರವುಗೊಳಿಸಲಾಯಿತು.
ಎಸ್ಪಿ ಸಿ.ಬಿ.ವೇದಮೂರ್ತಿ ಹಾಗೂ ನಗರ ಸಭೆಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸ್ಟೇಶನ್ ರಸ್ತೆಯಲ್ಲಿನ ಫುಟ್ಪಾತ್ ಅತಿಕ್ರಮಣ ಮಾಡಿ ಸಂಚಾರಕ್ಕೆ ಸಮಸ್ಯೆಯಾದ ಫುಟ್ಪಾತ್ ಅಂಗಡಿಗಳನ್ನು ತೆರವು ಮಾಡಿಸಿ ಸೂಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ಮತ್ತು ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.