ರಾಯಚೂರು: ಜಿಲ್ಲೆಯ ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಂದಕ ಕ್ರಾಸ್ನಿಂದ ನೀಲಕಂಟೇಶ್ವರ ದೇವಸ್ಥಾನ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಫುಟ್ಪಾತ್ನಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.
ರಸ್ತೆಯ ಎರಡೂ ಬದಿಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ನಡೆಯುತ್ತಿತ್ತು. ಇದು ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಅಲ್ಲದೆ, ಸಂಚಾರ ದಟ್ಟಣೆಯೂ ಉಂಟಾಗುತ್ತಿತ್ತು. ಇದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದ ಮೇರೆಗೆ ಮಸ್ಕಿ ಸಿಪಿಐ ಬೋಸರೆಡ್ಡಿ ಹಾಗೂ ಮುದಗಲ್ ಪುರಸಭೆಯ ಅಧಿಕಾರಿ ಸಿದ್ಧಪ್ಪ ಭಜಂತ್ರಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ಈ ವೇಳೆ ಪುಟ್ಪಾತ್ನಲ್ಲಿದ್ದ ಎಲ್ಲ ಅಂಗಡಿಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದೇ ವೇಳೆ ದರಸ್ತೆಯಲ್ಲೇ ನಿಲ್ಲಿಸುತ್ತಿದ್ದ ಆಟೋಗಳನ್ನು ಸಹ ಸ್ಥಳಾಂತರ ಮಾಡಿ ಸಂಚಾರಿ ನಿಯಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.