ರಾಯಚೂರು: ಜಿಲ್ಲೆಯ ಮಾನವಿ ತಾಲೂಕಿನ ಬಾಗಲವಾಡ ಗ್ರಾಮದಲ್ಲಿ ಇಂದು ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿದಿದ್ದು ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡಿದೆ.
ಗ್ರಾಮದ ಮುಖ್ಯ ರಸ್ತೆಯಲ್ಲಿ ಇಂಡಿಯನ್ ಪೆಟ್ರೋಲ್ ಬಂಕ್ ಎದುರಿನ ಶರಣಯ್ಯಸ್ವಾಮಿ ಎನ್ನುವವರ ಮನೆ ಬಳಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮಳೆಯ ನಡುವೆ ಬೆಂಕಿಯಿಂದ ಹೊತ್ತಿ ಉರಿದಿದೆ.
ಜಿಲ್ಲೆಯಲ್ಲಿ ಸುಮಾರು ನಾಲ್ಕೂವರೆ ಗಂಟೆಗಳ ಕಾಲ ಗುಡುಗು ಸಿಡಿಲು ಸಹಿತ ಭಾರಿ ಮಳೆ ಬಿದ್ದಿದೆ. ಇನ್ನು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ಗ್ರಾಮಸ್ಥರು ಕೆಲಕಾಲ ಆತಂಕಗೊಂಡಿದ್ದರು. ಬಳಿಕ ಬೆಂಕಿಯನ್ನ ನಂದಿಸಲಾಯಿತು.