ರಾಯಚೂರು: ರಾಯಚೂರಿನ ಬೈಪಾಸ್ ರಸ್ತೆ ಮಂಚಲಾಪುರ ಕ್ರಾಸ್ ಬಳಿ ಆ್ಯಂಬುಲೆನ್ಸ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿ ಸಾವನ್ನಪ್ಪಿದ್ದು ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದಾರೆ.
ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿ ಹನುಮಂತರಾಯ(40) ಮೃತಪಟ್ಟ ವ್ಯಕ್ತಿ. ದುರಂತದಲ್ಲಿ ಮೃತ ಹನುಮಂತರಾಯ ಅವರ ಪತ್ನಿ, ಇಬ್ಬರು ಮಕ್ಕಳು, ಸಂಬಂಧಿ ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ಸೇರಿದಂತೆ 6 ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮಾನ್ವಿಯ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್‌ಗೆ ರವಾನಿಸಲಾಗಿದೆ.
ರಾಯಚೂರು ಗ್ರಾಮೀಣ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.