ರಾಯಚೂರು: ಕೊರೊನಾ ಸೋಂಕು ತಡೆಗಟ್ಟುವ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಇಂದಿನಿಂದ ಮೇ 18 ರ ವರೆಗೆ ಮೂರು ದಿನ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗಿದೆ.
ನಗರದ ಎಲ್ಲಾ ರಸ್ತೆಗಳಲ್ಲಿ ಪೊಲೀಸರು ನಾಕಾ ಬಂದಿ ಹಾಕುವ ಮೂಲಕ ಜನರು ಓಡಾಟವನ್ನು ತಡೆಯುತ್ತಿದ್ದಾರೆ. ಆಸ್ಪತ್ರೆ, ಮೆಡಿಕಲ್ ಹಾಗೂ ಪೆಟ್ರೋಲ್ ಬಂಕ್ ಹಾಗೂ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಮೂರು ದಿನ ಸಂಪೂರ್ಣ ಬಂದ್ ಮಾಡಿ ಆದೇಶಿಸಲಾಗಿದೆ.
ಆಸ್ಪತ್ರೆಗೆ ತೆರಳುವವರು ಚೆಕ್ ಪೋಸ್ಟ್ನಲ್ಲಿ ಸೂಕ್ತ ದಾಖಲೆ ತೋರಿಸಬೇಕಾಗಿದ್ದು, ದಿನಪತ್ರಿಕೆ ಹಾಗೂ ಎಟಿಎಂ ಸೇವೆ ಲಭ್ಯವಿದೆ. ಆರ್ಟಿಪಿಎಸ್ ಮತ್ತು ವೈಟಿಪಿಎಸ್ನಲ್ಲಿ ಶೇ. 50 ರಷ್ಟು ಸಿಬ್ಬಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
ಅಂತ್ಯಕ್ರಿಯೆಗೆ ಮೂರು ದಿನಗಳ ಕಾಲ ಐದು ಜನಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಮದುವೆಯಲ್ಲಿ ಪಾಲ್ಗೊಳ್ಳಲು 10 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಮತ್ತು ಅರೆ ಸರ್ಕಾರಿ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ ನೀಡಲಾಗಿದೆ.