ರಾಯಚೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಜಿ.ಪಂ ಸಿಇಓ ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ವಿವಿಧ ಇಲಾಖೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ರಾಜ್ಯದಿಂದ ನಿಗದಿಯಂತೆ ಬಿಡುಗಡೆಯಾಗುವ ಅನುದಾನದಲ್ಲಿ ನಿಯಮಿತ ಕಾಮಗಾರಿ ನಡೆಸಬೇಕು.
2017-18ನೇ ಸಾಲಿನ ಹೆಚ್.ಕೆ.ಆರ್.ಡಿ.ಬಿ ಕಾಮಗಾರಿಗಳನ್ನು ಆಯಾ ಏಜನ್ಸಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಇಲಾಖೆಗಳು ಹೆಚ್ಚಿನ ಗಮನಹರಿಸಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಪ್ರಸಕ್ತ ವರ್ಷದಲ್ಲಿ ನಡೆಯುತ್ತಿರುವ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ದುರುಗೇಶ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.