ETV Bharat / state

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ.. ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ ಪರ್ವ - Resignations by BJP karyakarthas in raichur

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- ರಾಜ್ಯದ ಹಲವೆಡೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಾಜೀನಾಮೆ- ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಸದಸ್ಯರು

condemning-praveen-nettars-murder-resignation-continued-in-bjp
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ ಪರ್ವ
author img

By

Published : Jul 28, 2022, 3:52 PM IST

ಕಲಬುರಗಿ : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಹಲವು ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಚಿಂಚೋಳಿ ತಾಲೂಕಿನ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಜಯಪ್ರಕಾಶ್ ತಳವಾರ್ ಪಕ್ಷದ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಬಗ್ಗೆ ಚಿಂಚೋಳಿ ತಾಲೂಕಾ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಜೈ ಪ್ರಕಾಶ ತಳವಾರ ಅವರು ಪ್ರವೀಣ್ ಹತ್ಯೆಯನ್ನು ಖಂಡಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರದಲ್ಲೂ ನಮ್ಮದೇ ಸರ್ಕಾರ ಇದ್ದಾಗಿಯೂ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ. ಗ್ರಾಮ ಪಂಚಾಯತಿಯಿಂದ ಹಿಡಿದು ರಾಷ್ಟ್ರಪತಿಯವರೆಗೂ ಅಧಿಕಾರದಲ್ಲಿರುವ ಪಕ್ಷದ ಕಾರ್ಯಕರ್ತನಿಗೆ ರಕ್ಷಣೆ ಇಲ್ಲ ಎಂದಾದರೆ ಹೇಗೆ ? ಇಂತಹ ಪಕ್ಷದಲ್ಲಿ ನಾವೇಕೆ ಇರಬೇಕು? ಸರ್ಕಾರ ಬಗ್ಗೆ ಎಚ್ಚೆತ್ತುಕೊಳ್ಳಲಿ ಎನ್ನುವ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

condemning-praveen-nettars-murder-resignation-continued-in-bjp
ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ ಪರ್ವ

ರಾಯಚೂರು : ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ರಾಯಚೂರು ಜಿಲ್ಲೆಯಲ್ಲೂ ಯುವ ಮೋರ್ಚಾದ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಪಕ್ಷದ ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಸಾಲು ಸಾಲು ಹತ್ಯೆಗಳು ನಡೆದರೂ ಇದನ್ನು ಮಟ್ಟ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತರು ದೂರಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸೇರಿದಂತೆ ಶಿಕ್ಷಕ ಪ್ರಕೋಷ್ಟದ ಅಧ್ಯಕ್ಷರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ ಪರ್ವ

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಜಂಬಣ್ಣ ಮಂದಕಲ್, ಸಿಂಧನೂರು ‌ಮಂಡಲ ಅಧ್ಯಕ್ಷ ರವಿ ಉಪ್ಪಾರ, ಸಿಂಧನೂರು ಗ್ರಾಮೀಣ ಅಧ್ಯಕ್ಷ ಸಿದ್ದು ಹೂಗಾರ, ಮಸ್ಕಿ ಮಂಡಲ ಅಧ್ಯಕ್ಷ ನಿರುಪಾದಿ ತಮ್ಮ‌, ಲಿಂಗಸೂಗೂರು ನಗರದ ಯುವಘಟಕದ ಅಧ್ಯಕ್ಷ ಚನ್ನಬಸವ ಹಿರೇಮಠ ಸೇರಿದಂತೆ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಜೊತೆಗೆ ಶಿಕ್ಷಕ ಪ್ರಕೋಷ್ಟದ ಜಿಲ್ಲಾಧ್ಯಕ್ಷ ಶಿವಬಸಪ್ಪ ಮಾಲಿ ಪಾಟೀಲ್ ಕೂಡ ರಾಜಿನಾಮೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕಾರ್ಯವೈಖರಿಗೆ ಬಿಜೆಪಿ ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಎಸ್ ಡಿಪಿಐ ಹಾಗೂ ಪಿಎಫ್ ಐ ಸಂಘಟನೆಯನ್ನು ನಿಷೇಧಿಸುವಂತೆ ಅಲ್ಪ ಸಂಖ್ಯಾತ ಶಾಸಕರೇ ಸಿಎಂ ಗೆ ಮನವಿ ಸಲ್ಲಿಸಿದ್ದರೂ, ಸಂಘಟನೆಗಳನ್ನು ನಿಷೇಧಿಸದೆ ಸಿಎಂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಓದಿ : SDPI, PFI ಬ್ಯಾನ್ ಮಾಡುತ್ತೇವೆ, ಯಾರನ್ನೂ ಬಿಡುವುದಿಲ್ಲ: ಸಿ.ಟಿ.ರವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.