ರಾಯಚೂರು : ಮಸ್ಕಿ ವಿಧಾನಸಭೆ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಕುರುಕುಂದಾ ಗ್ರಾಮದಲ್ಲಿ ಪೊಲೀಸರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ ನಡೆಸಿರುವ ಘಟನೆ ನಡೆದಿದೆ.
ಮಸ್ಕಿ ತಾಲೂಕಿನ ಕುರುಕುಂದಾ ಗ್ರಾಮದಲ್ಲಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರನ್ನ ಬಿಡುತ್ತಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನ ದೂರ ಕಳಿಸಿ, ಬಿಜೆಪಿ ಕಾರ್ಯಕರ್ತರಿಗೆ ಮತಗಟ್ಟೆ ಹತ್ತಿರ ಹೋಗಲು ಅವಕಾಶ ನೀಡುತ್ತಿದ್ದಿರಿ ಎಂದು ಪೊಲೀಸರ ಜೊತೆ ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾವತಿ ವಾಗ್ವಾದಕ್ಕಿಳಿದರು. ಈ ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಓದಿ : ಉಪಚುನಾವಣೆ LIVE UPDATES: ಎಂಇಎಸ್ ಅಭ್ಯರ್ಥಿಗೆ ಮತ ಹಾಕುವ ವಿಡಿಯೋ ವೈರಲ್