ರಾಯಚೂರು: ಮಸ್ಕಿ ಉಪ ಚುನಾವಣೆ ಹಿನ್ನೆಲೆ ಇಂದು ಬಿಜೆಪಿ - ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಇಂದು ಸಚಿವ ಶ್ರೀರಾಮುಲು, ವಿಜಯೇಂದ್ರ ಸೇರಿದಂತೆ ಇತರ ನಾಯಕರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇನ್ನು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೂ ಮೊದಲು ಪಟ್ಟಣದಲ್ಲಿ ರ‍್ಯಾಲಿ ಹಾಗೂ ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ತುರುವಿಹಾಳ ನಾಮಪತ್ರ ಸಲ್ಲಿಸಲಿದ್ದಾರೆ.