ರಾಯಚೂರು: ದೆಹಲಿ ಜಾಮೀಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ಖಂಡಿಸಿ ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮೇಣದಬತ್ತಿ ಹಿಡಿದ ಮೌನ ಪ್ರತಿಭಟನೆ ನಡೆಸಿದ್ರು.
ನಗರದ ಮಹಾತ್ಮ ಗಾಂಧಿ ಪುತ್ಥಳಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಕೇಂದ್ರ ಸರ್ಕಾರ ದಮನಕಾರಿ ನೀತಿ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ದೌರ್ಜನ್ಯ ಮೂಲಕ ಹೋರಾಟ ಹತ್ತಿಕುವ ನೀತಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿದ್ರು.