ರಾಯಚೂರು : ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರಿಗೆ ಪರಿಹಾರ ಹಂಚುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ರಾಯಚೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದ್ರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಟಿಪ್ಪು ಸುಲ್ತಾನ್ ಗಾರ್ಡನ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಸುರಿದ ಮಳೆಯಿಂದ ನಗರದ ನಾನಾ ಬಡಾವಣೆಗಳಿಗೆ ನೀರು ನುಗ್ಗಿ ಜನರ ಬದುಕು ಬೀದಿಗೆ ಬಂದಿದೆ. ಸರ್ಕಾರವು ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಬೇಕು. ಆದ್ರೆ ಸರ್ಕಾರ ಸಮರ್ಪಕವಾಗಿ ಪರಿಹಾರ ಧನ ನೀಡದೇ ತಾರತಮ್ಯ ಅನುಸರಿಸುತ್ತಿದೆ. ಅಲ್ಲದೇ ಬಡವರ ಹಂಚಿಕೆ ಮಾಡಿದ ಮನೆಗಳಿಗೆ ಒಒಎಲ್ ನಂಬರ್ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.