ರಾಯಚೂರು: ಕೇಂದ್ರ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರ, ಪ್ರಧಾನಿಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತಾ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನ ರದ್ದುಗೊಳಿಸಿ ಸಂವಿಧಾನದ ಮೇಲೆ ಹಲ್ಲೆ ಮಾಡುವುದಕ್ಕಾಗಿ ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ಉತ್ತರಾಖಂಡ್ನ ಬಿಜೆಪಿ ಸರ್ಕಾರ ಮೀಸಲಾತಿ ಹಕ್ಕುಗಳನ್ನ ರದ್ದು ಮಾಡುವ ಕುತಂತ್ರವನ್ನ ಕೇಂದ್ರ ಸರ್ಕಾರ ನಡೆಸಿದೆ ಎಂದು ವಾಗ್ದಾಳಿ ನಡೆಸಿದರು.