ETV Bharat / state

ರಾಯಚೂರು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು, ಬಿಜೆಪಿಗೆ ಮಸ್ಕಿ ಪುರಸಭೆ - ಮಸ್ಕಿ ಪುರಸಭೆ ಚುನಾವಣೆ ಫಲಿತಾಂಶ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯಿತಿ ಹಾಗೂ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಧಿಕ ಸ್ಥಾನ ಪಡೆದಿದ್ದಾರೆ. ಉಳಿದಂತೆ, ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

Congress won Raichur town panchayat election
ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮಾಚರಣೆ
author img

By

Published : Dec 30, 2021, 12:49 PM IST

ರಾಯಚೂರು: ಜಿಲ್ಲೆಯಲ್ಲಿ ನಡೆದ ಮೂರು ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಬಹುಮತ ಸಾಧಿಸಿದ್ದಾರೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಅಧಿಕಾರ ಹಿಡಿಯುವಲ್ಲಿ ಕಾಂಗ್ರೆಸ್​​ ಯಶಸ್ವಿಯಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮಾಚರಣೆ

ತುರುವಿಹಾಳ ಪ.ಪಂ 'ಕೈ' ವಶ:

ಜಿಲ್ಲೆಯ ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯಿತಿಯ ಒಟ್ಟು 14 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-9, ಬಿಜೆಪಿ-2 ಹಾಗೂ ಮೂವರು ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ತುರುವಿಹಾಳ ಕಾಂಗ್ರೆಸ್​​ನ ಹಾಲಿ ಶಾಸಕ ಬಸನಗೌಡ ತುರುವಿಹಾಳ ಸ್ವಕ್ಷೇತ್ರವಾಗಿದ್ದು, ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಕ್ಷೇತ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಸಕ್ಸಸ್‌ ಕಂಡಿದ್ದಾರೆ.

ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್​​​ ಅಭ್ಯರ್ಥಿಗಳು ಹೆಚ್ಚು ಸ್ಥಾನ ಪಡೆದಿದ್ದಾರೆ. ಒಟ್ಟು 20 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-9, ಬಿಜೆಪಿ-6, ಜೆಡಿಎಸ್-3 ಹಾಗೂ ಪಕ್ಷೇತರ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದರು.

ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕರಿಗೆ ಹಿನ್ನಡೆ:

ಸಿರವಾರ ತಾಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತದಿಂದ ಜಯ ಸಾಧಿಸಿದ್ದಾರೆ. ಒಟ್ಟು 16 ಸ್ಥಾನಗಳ ಪೈಕಿ ಕಾಂಗ್ರೆಸ್-8, ಬಿಜೆಪಿ-4, ಜೆಡಿಎಸ್-3 ಹಾಗೂ ಪಕ್ಷೇತರ ಅಭ್ಯರ್ಥಿ ಗೆಲುವು ಪಡೆದರು. ಈ ಮೂಲಕ ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕರಿಗೆ ಮುಖಭಂಗವಾಗಿದೆ.

ಮಸ್ಕಿ ಬಿಜೆಪಿಗೆ:

ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಒಟ್ಟು 23 ಸ್ಥಾನಗಳಲ್ಲಿ, ಬಿಜೆಪಿ-14, ಕಾಂಗ್ರೆಸ್-9 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 12 ಸ್ಥಾನಗಳ ಪೈಕಿ ಕಾಂಗ್ರೆಸ್-5, ಬಿಜೆಪಿ-6, ಪಕ್ಷೇತರ-1 ಅಭ್ಯರ್ಥಿಗಳು ಸಾಧಿಸಿದ್ದಾರೆ.

ಇದನ್ನೂ ಓದಿ: ವಿಟ್ಲ, ಕೋಟೆಕಾರ್ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಮತ್ತೆ ಅರಳಿದ ಕಮಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.