ರಾಯಚೂರು: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಮಾನ್ವಿ ತಾಲೂಕಿನ ಬೇವಿನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದು, ಹೊಲಗಳಿಗೆ ನೀರು ನುಗ್ಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸೇತುವೆ ಸಂಪೂರ್ಣವಾಗಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಇದರಿಂದ ಬೇವಿನೂರು-ತುಪ್ಪದೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿರುವುದರಿಂದ ರಸ್ತೆ ಸಂಪರ್ಕವಿಲ್ಲದೆ ಜನರ ಸಂಚಾರಕ್ಕೆ ತೊಂದರೆಯಾಗಿದೆ.
ರೈತರ ಹತ್ತಿ ಹೊಲಗಳಿಗೆ ನೀರು ನುಗ್ಗಿ ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಅಲ್ಲದೇ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಮನೆಯೊಂದರ ಗೋಡೆ ಕುಸಿದುಬಿದ್ದಿದೆ.