ETV Bharat / state

ಫೆ.14ರಂದು ಜೆಡಿಎಸ್ ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಮಾವೇಶ

ಫೆ.14 ರಂದು ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಶಾಸಕ ವೆಂಟಕರಾವ್ ನಾಡಗೌಡ ಹೇಳಿದ್ದಾರೆ.

raichur
ಜೆಡಿಎಸ್ ಶಾಸಕ ವೆಂಟಕರಾವ್ ನಾಡಗೌಡ
author img

By

Published : Feb 9, 2021, 8:18 AM IST

ರಾಯಚೂರು: ಜೆಡಿಎಸ್ ಪಕ್ಷದ ಬಲವರ್ಧನೆಗೆ ಫೆ.14 ರಂದು ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಮಾವೇಶ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಜೆಡಿಎಸ್ ಶಾಸಕ ವೆಂಟಕರಾವ್ ನಾಡಗೌಡ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಜರುಗಲಿದೆ. ಕೆಲ ದಿನಗಳ ಹಿಂದೆ ನಡೆದ ಪಕ್ಷದ ಸಭೆಯಲ್ಲಿ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳ ವಿಸರ್ಜನೆ ಮಾಡುವ ಮೂಲಕ ವೀಕ್ಷಕರನ್ನು ನೇಮಿಸಲು ತೀರ್ಮಾನಿಸಲಾಗಿದೆ ಎಂದರು.

ಜೆಡಿಎಸ್ ಶಾಸಕ ವೆಂಟಕರಾವ್ ನಾಡಗೌಡ

ಫೆ.15 ರಿಂದ ಕಲ್ಯಾಣ ಕರ್ನಾಟಕ ಭಾಗ(ಹೈದರಾಬಾದ್-ಕರ್ನಾಟಕ)ದಲ್ಲಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ವೀಕ್ಷಕರು ಬೀದರ್​​ನಿಂದ ಬಳ್ಳಾರಿವರೆಗೆ ಪ್ರವಾಸವನ್ನು ಹಮ್ಮಿಕೊಳ್ಳುವ ಮೂಲಕ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅಡಹಾಕ್ ಸಮಿತಿ ರಚಿಸುವ ಮಾಹಿತಿ ಸಂಗ್ರಹಿಸುತ್ತಾರೆ. ಮಸ್ಕಿ ಬೈ ಎಲೆಕ್ಷನ್​ನಲ್ಲಿ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೂ ಪ್ರಬಲ ಪೈಪೋಟಿ ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಓದಿ: 2030ರ ವೇಳೆಗೆ ಭಾರತೀಯ ಔಷಧ ಉದ್ಯಮ 130 ಶತಕೋಟಿ ಡಾಲರ್‌ ಏರಿಕೆ: ಸದಾನಂದ ಗೌಡ

ನಾಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಜಿಲ್ಲೆಗೆ ಆಗಮಿಸಲಿದ್ದಾರೆ. ದೇವದುರ್ಗ ತಾಲೂಕಿನ ರೈತನೊಬ್ಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪುತ್ಥಳಿಯನ್ನು ನಿರ್ಮಿಸಿದ್ದು, ಸ್ವತಃ ದೇವೇಗೌಡರು ಅನಾವರಣಗೊಳಿಸಲಿದ್ದಾರೆ. ಇದಾದ ಬಳಿಕ ದೇವದುರ್ಗದಲ್ಲಿ ಸಾರ್ವಜನಿಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.