ETV Bharat / state

ಯಶಸ್ವಿಯಾದ ಅಧಿಕಾರಿಗಳ ಮಾತುಕತೆ: ಅಹೋರಾತ್ರಿ ಪ್ರತಿಭಟನೆ ಅಂತ್ಯ - lingasugur news

ಲಿಂಗಸುಗೂರು ತಾಲೂಕು ನಡುಗಡ್ಡೆ ನಿವಾಸಿಗಳ ಶಾಶ್ವತ ಸ್ಥಳಾಂತರಕ್ಕೆ ಆಗ್ರಹಿಸಿ ಎರಡು ದಿನದಿಂದ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ಅಂತ್ಯಗೊಂಡಿದೆ.

lingasugur
lingasugur
author img

By

Published : Aug 26, 2020, 12:48 AM IST

ಲಿಂಗಸುಗೂರು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ನಡುಗಡ್ಡೆ ನಿವಾಸಿಗಳ ಶಾಶ್ವತ ಸ್ಥಳಾಂತರಕ್ಕೆ ಆಗ್ರಹಿಸಿ ಎರಡು ದಿನದಿಂದ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ಅಧಿಕಾರಿಗಳ ಲಿಖಿತ ಭರವಸೆಯಿಂದ ಅಂತ್ಯಗೊಂಡಿದೆ.

ಅಹೋರಾತ್ರಿ ಪ್ರತಿಭಟನೆ ಅಂತ್ಯ

ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್​ ಚಾಮರಾಜ ಪಾಟೀಲ ಅವರು ಪ್ರತಿಭಟನಾಕಾರರ ಜೊತೆ ಸುದೀರ್ಘ ಮಾತುಕತೆ ನಡೆಸಿದರು. ದಲಿತ ಸಂಘದ ಜಿಲ್ಲಾ ಕಾರ್ಯದರ್ಶಿ ಹನುಮಂತಪ್ಪ ವೆಂಕಟಾಪುರ ಮಾತನಾಡಿ, ಕರಕಲಗಡ್ಡಿ, ಮ್ಯಾದರಗಡ್ಡಿ, ವೆಂಕಮ್ಮನಗಡ್ಡಿ ನಿವಾಸಿಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡಿ. ಇಲ್ಲವೇ ಅವರನ್ನು ಅವರ ಪಾಡಿಗೆ ಬದುಕಲು ಬಿಡಿ ಎಂದು ಹೇಳುತ್ತ ಪರ್ಯಾಯ ವ್ಯವಸ್ಥೆ ಒದಗಿಸುವಂತೆ ಒತ್ತಾಯಿಸಿದರು.

ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮಾತನಾಡಿ, ಆಡಳಿತವು ಅವರ ಸಮಸ್ಯೆಗೆ ಸ್ಪಂದಿಸಲು ಸಿದ್ಧವಿದೆ. ತಾಂತ್ರಿಕ ತೊಂದರೆ ಇದ್ದು, ಶೀಘ್ರದಲ್ಲಿಯೇ ನ್ಯಾಯ ಒದಗಿಸಲಾಗುವುದು. ಉಳಿದಂತೆ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಅಗತ್ಯ ವರದಿ ಸಲ್ಲಿಸಲಾಗುವುದು ಎಂದು ಹೇಳಿ ಮನವೊಲಿಸುವಲ್ಲಿ ಯಶಸ್ವಿಯಾದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.