ರಾಯಚೂರು: ಕ್ವಾರಂಟೈನ್ ಕೇಂದ್ರದಲ್ಲಿರುವ ಕೊರೊನಾ ಸೋಂಕಿತರು ಚೆಸ್, ಕೇರಂ ಆಡುವ ಮೂಲಕ ಸಮಯ ಕಳೆಯುತ್ತಿದ್ದಾರೆ.
ಜಿಲ್ಲೆಯ ಮಾನ್ವಿ ತಾಲೂಕಿನ ಕ್ವಾರಂಟೈನ್ ಕೇಂದ್ರದಲ್ಲಿರುವ ಸೋಂಕಿತರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿರುವುದರಿಂದ ಮುಂಜಾಗ್ರತೆಯೊಂದಿಗೆ ಕೇರಂ, ಚೇಸ್ ಆಡುವ ಮೂಲಕ ಸಮಯ ಕಳೆಯಲು ಅವಕಾಶ ಮಾಡಿಕೊಡಲಾಗಿದೆ.
ಇದರ ಜೊತೆಗೆ ಕ್ವಾರಂಟೈನ್ ಕೇಂದ್ರದಲ್ಲಿರುವ ಸೋಂಕಿತ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ನೀಡುವಂತೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನಕ್ಕೆ ಕೋರಲಾಗಿತ್ತು. ಅದರಂತೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 50 ಆಟಿಕೆ ಸಾಮಗ್ರಿಗಳನ್ನು ಒದಗಿಸಿದೆ. ಮಕ್ಕಳಿಗೂ ಕೂಡ ಮುನ್ನೆಚ್ಚರಿಕೆಯೊಂದಿಗೆ ಆಡವಾಡಲು ಅವಕಾಶ ಕಲ್ಪಿಸಲಾಗಿದೆ.