ETV Bharat / state

ರಾಯಚೂರಲ್ಲಿ ಏರುತ್ತಿದೆ ಸೋಂಕಿತರ ಸಂಖ್ಯೆ, ಹೊರ ರಾಜ್ಯ, ಜಿಲ್ಲೆಯಿಂದ ಬಂದವ್ರಿಗೆ ಹೋಂ ಕ್ವಾರಂಟೈನ್ - ರಾಯಚೂರು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ ಸುದ್ದಿ

ಜಿಲ್ಲೆಯಲ್ಲಿ ನಿನ್ನೆಯವರೆಗೂ 26,388 ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 23,599 ಜನರ ವರದಿ ನೆಗೆಟಿವ್ ಬಂದಿವೆ. ಇನ್ನುಳಿದ 2,168 ಜನರ ವರದಿ ಬರುವುದು ಬಾಕಿಯಿದೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ
author img

By

Published : Jul 9, 2020, 11:23 AM IST

ರಾಯಚೂರು : ಜಿಲ್ಲೆಯಲ್ಲಿ ಒಂದೇ ದಿನಕ್ಕೆ 17 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 615ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಸೋಂಕಿತರು ಪತ್ತೆಯಾಗಿರುವ 134 ಏರಿಯಾಗಳನ್ನು ಕಂಟೈನ್‌ಮೆಂಟ್‌ ವಲಯ ಎಂದು ಗುರುತಿಸಲಾಗಿತ್ತು. ಇದರಲ್ಲಿ ಅವಧಿ ಪೂರ್ಣಗೊಂಡ 57 ಕಂಟೈನ್‌ಮೆಂಟ್‌ ಪ್ರದೇಶ ಮುಕ್ತ ಮಾಡಲಾಗಿದ್ದು, ಇನ್ನುಳಿದ 77 ವಲಯಗಳು ಸಕ್ರಿಯವಾಗಿವೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ: ಗ್ರೌಂಡ್ ರಿಪೋರ್ಟ್

ಪತ್ತೆಯಾಗಿರುವ 615 ಸೋಂಕಿತರಲ್ಲಿ ಈಗಾಗಲೇ 442 ಜನರು ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 168 ಪ್ರಕರಣಗಳು ಸಕ್ರಿಯವಾಗಿವೆ. ಅಂತರ ಜಿಲ್ಲೆ, ಹೊರ ರಾಜ್ಯದ ಬಂದವರನ್ನು ಹೋಮ್ ಕ್ವಾರಂಟೈನ್ ಮಾಡಲಾಗುತ್ತಿದೆ.

ಸೋಂಕು ತಡೆಗಟ್ಟುವಿಕೆಗೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಲವು ಕ್ರಮ ಕೈಗೊಳ್ಳುತ್ತಿದೆ. ಆದರೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.