ರಾಯಚೂರು: ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.
ಲಿಂಗಸುಗೂರು ಮೂಲದ 70 ವರ್ಷದ ವೃದ್ಧೆಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ, ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವೃದ್ಧೆ ಬಿಪಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದ್ದು, ಸದ್ಯ ವೃದ್ಧೆಯ ಸಾವಿಗೆ ಕೊರೊನಾ ಸೋಂಕು ಕಾರಣವಾ ಅಥವಾ ಬೇರೆ ಕಾಯಿಲೆ ಕಾರಣವಾ ಎಂಬುದನ್ನು ತಜ್ಞರ ಸಮಿತಿ ನಿರ್ಧರಿಸಬೇಕಿದೆ.
ಮೃತ ವೃದ್ಧೆ ಶವಸಂಸ್ಕಾರವನ್ನ ಕೋವಿಡ್-19 ಮಾರ್ಗಸೂಚಿ ಅನ್ವಯ ನೇರವೇರಿಸಲು ನಿರ್ಧರಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.