ರಾಯಚೂರು: ಜಿಲ್ಲೆಯಲ್ಲಿಂದು ಹೊಸದಾಗಿ 191 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4350ಕ್ಕೆ ಏರಿಕೆಯಾಗಿದೆ.
ಅಲ್ಲದೆ, ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 46ಕ್ಕೆ ಏರಿದೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 2459 ಜನರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1845 ಸಕ್ರಿಯವಾಗಿವೆ.
ಪತ್ತೆಯಾಗಿರುವ ಸೋಂಕಿತರನ್ನ ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಕೋವಿಡ್ ಆಸ್ಪತ್ರೆ ದಾಖಲಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.