ರಾಯಚೂರು: ನಗರ ಕ್ಷೇತ್ರದ ಶಾಸಕ ಡಾ. ಶಿವರಾಜ್ ಪಾಟೀಲ್ ನಿನ್ನೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ರ‍್ಯಾಪಿಡ್ ಟೆಸ್ಟ್‌ನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಆದರೆ ರೋಗದ ಲಕ್ಷಣ ಕಾಣಿಸಿಕೊಂಡಿಲ್ಲ. ಸದ್ಯ ಕೊರೊನಾ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಜತೆಗೆ ತಮ್ಮ ಸಂಪರ್ಕದಲ್ಲಿರುವವರಿಗೂ ಕ್ವಾರಂಟೈನ್ ಆಗುವಂತೆ ತಿಳಿಸಿದ್ದಾರೆ.
ಸೋಂಕು ದೃಢಪಟ್ಟಿದ್ದು, ಆರೋಗ್ಯದಲ್ಲಿ ತೊಂದರೆಯಿಲ್ಲ. ಯಾರು ಆತಂಕ ಪಡುವುದು ಬೇಡ ಎಂದಿದ್ದಾರೆ. ಇದೀಗ ಶಾಸಕರ ಸಂಪರ್ಕದಲ್ಲಿರುವವರಿಗೆ ಕೊರೊನಾ ಭೀತಿ ಎದುರಾಗಿದೆ.