ರಾಯಚೂರು : ಇಂದು 105 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆಗಾಗಿ ರವಾನಿಸಲಾಗಿದೆ.
ಈ ಹಿಂದಿನ 140 ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿವೆ. ಇದುವರೆಗೆ 1,665 ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 1,381 ವರದಿಗಳು ನೆಗೆಟಿವ್ ಬಂದಿವೆ. 284 ಮಾದರಿಗಳ ಫಲಿತಾಂಶ ಬರಬೇಕಿದೆ.
ಫಿವರ್ ಕ್ಲಿನಿಕ್ಗಳಲ್ಲಿ 326 ಜನರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗಿದೆ. ಯಾವುದೇ ಪಾಸಿಟಿವ್ ಪ್ರಕರಣ ಬಂದಿಲ್ಲವೆಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.