ETV Bharat / state

ವಿದ್ಯಾಗಮ: ಶಿಕ್ಷಕನಿಂದ ಐವರು ವಿದ್ಯಾರ್ಥಿಗಳಿಗೆ ಕೊರೊನಾ.. ಪೋಷಕರಲ್ಲಿ ಆತಂಕ

ಶಿಕ್ಷಣ ಇಲಾಖೆ ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯಡಿ ಪಾಠ ಮಾಡುವುದಕ್ಕೆ ಅವಕಾಶ ನೀಡಿತ್ತು. ಇದೀಗ ಕಲಬುರಗಿಯಲ್ಲಿ ಶಿಕ್ಷಕನಿಂದ ಐವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡಿರುವುದು ಮತ್ತೊಮ್ಮೆ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.

ವಿದ್ಯಾಗಮ
ವಿದ್ಯಾಗಮ
author img

By

Published : Oct 9, 2020, 9:05 PM IST

Updated : Oct 9, 2020, 9:10 PM IST

ರಾಯಚೂರು: ಕೊರೊನಾ ಭೀತಿಯಿಂದಾಗಿ ಶಿಕ್ಷಕರು ಮಕ್ಕಳು ಇರುವ ಕಡೆ ತೆರಳಿ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ವಿದ್ಯಾಗಮ, ವಠಾರ ಶಾಲೆಗಳನ್ನು ಆರಂಭಿಸಿದೆ. ಈ ನಡುವೆ ಕೆಲ ಶಿಕ್ಷಕರು ಹಾಗೂ ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿರುವುದು ಮತ್ತೆ ಪೋಷಕರಲ್ಲಿ ಆತಂಕ ಮೂಡಿಸಿದೆ.

ವಿದ್ಯಾಗಮ ಯೋಜನೆಯಡಿ ಭೋದನೆ

ಜಿಲ್ಲೆಯಲ್ಲಿ ಒಟ್ಟು 7,717 ಶಿಕ್ಷಕರು ವಿದ್ಯಾಗಮ ಯೋಜನೆಯಡಿ 10,003 ಕಾಲ್ಪನಿಕ ತರಗತಿಗಳನ್ನು ನಡೆಸುತ್ತಿದ್ದು, 2,55,546 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ದೇವಾಲಯಗಳು, ಸಮುದಾಯ ಭವನಗಳಲ್ಲಿ ಮಕ್ಕಳನ್ನು ಸೇರಿಸಿ ಬೋಧನೆ ಮಾಡುವ ವೇಳೆ ಸಾಕಷ್ಟು ಅಡ್ಡಿ ಎದುರಾಗಿದ್ದರಿಂದ ಶಿಕ್ಷಣ ಇಲಾಖೆ ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯಡಿ ಪಾಠ ಮಾಡುವುದಕ್ಕೆ ಅವಕಾಶ ನೀಡಿತ್ತು. ಇದೀಗ ಕಲಬುರಗಿಯಲ್ಲಿ ಶಿಕ್ಷಕನಿಂದ ಐವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡಿರುವುದು ಮತ್ತೊಮ್ಮೆ ಪೋಷಕರಲ್ಲಿ ಆತಂಕವನ್ನು ಸೃಷ್ಟಿಸಿದೆ.

ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಏಳು ಜನ ಶಿಕ್ಷಕರು ಮೃತಪಟ್ಟಿದ್ದಾರೆ. ಇವರಲ್ಲಿ ವಿದ್ಯಾಗಮ ಯೋಜನೆ ಅನುಷ್ಠಾನಕ್ಕೆ ಮುನ್ನ ಲಿಂಗಸುಗೂರು ತಾಲೂಕಿನಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಶಿಕ್ಷಕರು ಮೃತಪಟ್ಟಿದ್ದರು. ಯೋಜನೆ ಆರಂಭದ ಬಳಿಕ ರಾಯಚೂರು ಹಾಗೂ ಮಾನ್ವಿ ತಾಲೂಕಿನಲ್ಲಿ ತಲಾ ಇಬ್ಬರು, ಸಿಂಧನೂರು ತಾಲೂಕಿನಲ್ಲಿ ಒಬ್ಬ ಶಿಕ್ಷಕ ಮೃತಪಟ್ಟಿದ್ದರು.

Last Updated : Oct 9, 2020, 9:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.