ರಾಯಚೂರು/ಕೊಪ್ಪಳ: ರಾಯಚೂರು ಜಿಲ್ಲೆಯಲ್ಲಿ ಇಂದು 58 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,739 ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 16, ಮಾನವಿ 3, ಲಿಂಗಸೂಗೂರು 4, ಸಿಂಧನೂರು 30, ದೇವದುರ್ಗದಲ್ಲಿ 5 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 11,849 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಇನ್ನುಳಿದ 746 ಪ್ರಕರಣಗಳು ಸಕ್ರಿಯವಾಗಿವೆ. ಇಂದು ಒಬ್ಬರು ಮೃತಪಡುವ ಮೂಲಕ ಸಾವಿನ ಸಂಖ್ಯೆ 144ಕ್ಕೆ ಏರಿಕೆಯಾಗಿದೆ.
ರಿಮ್ಸ್, ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ 204 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಾಲೂಕಿನ ಸ್ವಾಂಸ್ಥಿಕ ಕ್ವಾರಂಟೈನ್ನಲ್ಲಿ 42 ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎನ್ಎಂಸಿಎಚ್, ಖಾಸಗಿ ಕೋವಿಡ್ ಆಸ್ಪತ್ರೆ, ಹೊಟೇಲ್ ಕ್ವಾರೆಂಟೈನ್ನಲ್ಲಿ 109 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಮ್ ಕ್ವಾರಂಟೈನ್ನಲ್ಲಿ 391 ಇದ್ದಾರೆ. ಇಂದು ಪತ್ತೆಯಾಗಿರುವ ಸೋಂಕಿತರ ಸಂಪರ್ಕಗಳನ್ನ ಸಂಗ್ರಹಿಸುವ ಕಾರ್ಯ ನಡೆಸಲಾಗಿಸುವ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಪ್ಪಳ ಜಿಲ್ಲೆಯಲ್ಲಿ ಇಂದು 66 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,714 ಕ್ಕೆ ಏರಿಕೆಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದರು.
ಗಂಗಾವತಿ ತಾಲೂಕಿನಲ್ಲಿ- 20, ಕೊಪ್ಪಳ ತಾಲೂಕಿನಲ್ಲಿ 28, ಕುಷ್ಟಗಿ ತಾಲೂಕಿನಲ್ಲಿ 12 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 06 ಪ್ರಕರಣ ಸೇರಿ ಇಂದು ಒಟ್ಟು 66 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 270 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಇಂದು 47 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 11,595 ಜನರು ಗುಣಮುಖರಾಗಿದ್ದಾರೆ. 752 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.