ETV Bharat / state

ರಾಯಚೂರಿನಲ್ಲಿ ಇಂದು 12 ಜನರಿಗೆ ಕೊರೊನಾ: ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ

ರಾಯಚೂರು ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.

author img

By

Published : Jul 1, 2020, 8:38 PM IST

Raichur
12 ಜನರಿಗೆ ಕೊರೊನಾ ಸೋಂಕು

ರಾಯಚೂರು: ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.

ಕಳೆದ 44 ದಿನಗಳಲ್ಲಿ 500 ಜನರಿಗೆ ಸೋಂಕು ತಗುಲಿದೆ. ಸೋಂಕಿನಿಂದ ಆಸ್ಪತ್ರೆಯಲ್ಲಿ ಇಂದಿನವರೆಗೆ ದಾಖಲಾದ 500 ಸೋಂಕಿತರ ಪೈಕಿ 404 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 96 ಪ್ರಕರಣಗಳು ಸಕ್ರಿಯವಾಗಿವೆ. ಇಂದು ಹರಡಿದ 12 ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಮರಳಿದ್ದ ಮೂವರು ವಲಸೆ ಕಾರ್ಮಿಕರು, ಪಿ-8663 ಸಂಪರ್ಕ ಹೊಂದಿದ್ದ ಮೂವರು, ಬೆಂಗಳೂರಿನಿಂದ ಬಂದಿದ್ದ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಇನ್ನುಳಿದ ನಾಲ್ಕು ಜನರಿಗೆ ಸೋಂಕು ಹರಡಿರುವ ಮೂಲ ಪತ್ತೆ ಮಾಡಲಾಗುತ್ತಿದೆ.

Raichur
ರಾಯಚೂರಿನಲ್ಲಿ ಇಂದು 12 ಜನರಿಗೆ ಕೊರೊನಾ

ಜಿಲ್ಲೆಯಿಂದ ಕಳುಹಿಸಿದ್ದ 23,628 ಜನರಿಂದ ಸಂಗ್ರಹಿಸಿದ್ದ ಗಂಟಲು ದ್ರವದ ಮಾದರಿ ವರದಿಯಲ್ಲಿ 21,854 ವರದಿಗಳು ನೆಗೆಟಿವ್ ಬಂದಿವೆ. ಇನ್ನುಳಿದ 1774 ವರದಿಗಳು ಬರುವುದು ಬಾಕಿಯಿದೆ. ಸೋಂಕಿತರನ್ನು ಐಸೋಲೋಷನ್ ವಾರ್ಡ್​ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಜಿಲ್ಲೆಯಲ್ಲಿ ಪ್ರತಿ ದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಾ ಹೋಗುತ್ತಿರುವುದರಿಂದ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ಹೈರಾಣಾಗಿದೆ.

ಮಸ್ಕಿ ಸ್ಟಾಫ್ ನರ್ಸ್​ಗೆ ಕೊರೊನಾ ಸೋಂಕು ತಗುಲಿದ್ದು, ಜೂ. 20ರಿಂದ 21ರವರೆಗೆ ಸಿಂಧನೂರು ನಗರದಲ್ಲಿ ವೆಂಕಟೇಶ್ವರ ಕಾಲೋನಿಯಲ್ಲಿ ವಿವಾಹ ಸಮಾರಂಭದಲ್ಲಿ ಭಾಗವಹಿಸಿರುವುದು ಆತಂಕ ಹೆಚ್ಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.