ರಾಯಚೂರು: ಜಿಲ್ಲೆಯಲ್ಲಿ ಇಂದು 129 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 10,823ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 50, ಮಾನ್ವಿ 21, ಲಿಂಗಸೂಗೂರು 6, ಸಿಂಧನೂರು 29, ದೇವದುರ್ಗ 23 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರಗೆ ಪತ್ತೆಯಾಗಿರುವ ಸೋಂಕಿತರಲ್ಲಿ 9,076 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 1,614 ಪ್ರಕರಣಗಳು ಸಕ್ರಿಯವಾಗಿವೆ. ಇಲ್ಲಿಯವರೆಗೆ ಸೋಂಕಿನಿಂದ 133 ಜನ ಮೃತಪಟ್ಟಿದ್ದಾರೆ.
ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.