ರಾಯಚೂರು: ನಗರದಲ್ಲಿ ಕೊರೊನಾ ಸೋಂಕಿತ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಮಡ್ಡಿಪೇಟೆಯ ಸುಮಾರು 65 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಚಿಕಿತ್ಸೆಗೆಂದು ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿತ್ತು. ಕೋವಿಡ್ ಜೊತೆ ವೃದ್ಧ ನ್ಯುಮೋನಿಯಾದಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ವೃದ್ಧ ಮೃತಪಟ್ಟಿದ್ದು, ಕೊರೊನಾದಿಂದಲೋ ಅಥವಾ ನ್ಯುಮೋನಿಯಾದಿಂದಲೋ ಎಂಬುದು ತಿಳಿದು ಬರಬೇಕಿದೆ. ಮಾರ್ಗಸೂಚಿ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಗಿದೆ.