ರಾಯಚೂರು: ಸಿಂಧುತ್ವ ಪ್ರಮಾಣಪತ್ರ ನೀಡಲು ಅರ್ಜಿದಾರರಿಂದ 5 ಸಾವಿರ ರೂ. ಲಂಚ ಕೇಳುತ್ತಿದ್ದಾರೆ ಎಂಬ ಆರೋಪ ಸಿರವಾರ ತಹಶೀಲ್ದಾರ್ ಕಚೇರಿ ವಿರುದ್ಧ ಕೇಳಿ ಬಂದಿದೆ.
ಜಿಲ್ಲೆಯ ಸಿರವಾರ ಪಟ್ಟಣದಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಎಸ್ಡಿಎ ಸಿಬ್ಬಂದಿ ಹಾಗೂ ಕಂಪ್ಯೂಟರ್ ಆಪರೇಟರ್ಗಳು ಸಿಂಧುತ್ವ ಪ್ರಮಾಣಪತ್ರ ನೀಡುವುದಕ್ಕೆ 5 ಸಾವಿರ ರೂ. ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.