ETV Bharat / state

ರಾಯಚೂರಿನಲ್ಲಿ ಶೀಲ ಶಂಕಿಸಿ ಚಾಕುವಿನಿಂದ ಇರಿದು ಪತ್ನಿ ಕೊಂದ ಪತಿ

ಶೀಲ ಶಂಕಿಸಿದ ಪತಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಸಿಂಧನೂರಿನಲ್ಲಿ ನಡೆದಿದೆ.

husband-brutally-murdered-his-wife-in-raichur
ರಾಯಚೂರು: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ
author img

By

Published : Jun 7, 2023, 4:27 PM IST

ರಾಯಚೂರು: ಶೀಲ ಶಂಕಿಸಿದ ಪತಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಸಿಂಧನೂರಿನ ಮಹೆಬೂಬ್ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಶಿಲ್ಪಾ ಸಿದ್ದು (27) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಸಿದ್ದು ಗೊಂದಳಿ ದುಷ್ಕೃತ್ಯ ಎಸಗಿದ ಆರೋಪಿ. ಶಿಲ್ಪಾ ಹಾಗೂ ಸಿದ್ದು ಗೊಂದಳಿ 10 ವರ್ಷಗಳ ಹಿಂದೆ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.

ಮಂಗಳವಾರ ತಡರಾತ್ರಿ ಪತ್ನಿಯ ಶೀಲ ಶಂಕಿಸಿ ಆರೋಪಿ ವಾಗ್ವಾದ ನಡೆಸಿದ್ದಾನೆ. ಜಗಳ ತಾರಕಕ್ಕೇರಿ ಕುಪಿತಗೊಂಡು ಚಾಕುವಿನಿಂದ ದೇಹದ ನಾನಾ ಭಾಗಗಳಿಗೆ ಇರಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವಗೊಂಡು ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಇಂದು ಬೆಳಿಗಿನ ಜಾವ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸಿಂಧನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿಲ್ಪಾ ತಾಯಿ ಸಿಂಧನೂರು ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ತನಿಖೆ ಮುಂದುವರೆಸಿದ್ದಾರೆ.

ಬೈಕ್​​ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಸಾವು: ಮತ್ತೊಂದೆಡೆ, ಬೈಕ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು- ಲಿಂಗಸೂಗೂರು ರಾಜ್ಯ ಹೆದ್ದಾರಿಯಲ್ಲಿ ಬರುವ ಸಾಥ್ ಮೈಲ್ ಬಳಿ ನಡೆದಿದೆ. ಮೃತರನ್ನು ಹುಣಶ್ಯಾಳ ಹುಡಾ ಗ್ರಾಮದ ನಿವಾಸಿಗಳಾದ ಹನುಮೇಶ್ (30) ಹಾಗೂ ಆಂಜನೇಯ (35) ಎಂದು ಗುರುತಿಸಲಾಗಿದೆ. ಇವರು ರಾಯಚೂರು ಕಡೆಯಿಂದ ಹುಣಿಶ್ಯಾಳ ಹುಡಾಕ್ಕೆ ಹೊರಟಿದ್ದರು. ಆದರೆ, ಮಾರ್ಗ ಮಧ್ಯೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿಯ ಚಕ್ರಕ್ಕೆ ಸಿಲುಕಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮನ ಮಗನನ್ನೇ ಕೊಲೆಗೈದ ದೊಡ್ಡಪ್ಪ: ಮೊಬೈಲ್​ನಲ್ಲಿ ಮಾತನಾಡುವಾಗ ಪತ್ನಿಗೆ ಬೈದದ್ದನ್ನು ತನಗೇ ಬೈದಿದ್ದೆಂದು ತಪ್ಪಾಗಿ ಭಾವಿಸಿ ವೃದ್ಧನೋರ್ವ ತನ್ನ ಸಹೋದರನ ಮಗನನ್ನೇ ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯತೀಶ್ ​​(37) ಎಂದು ಗುರುತಿಸಲಾಗಿದೆ. ಹನುಮಂತಯ್ಯ ಆರೋಪಿ. ಕಳೆದ ಜೂನ್​​ 4ರ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಯತೀಶ್​ ತನ್ನ ಮಡದಿಗೆ ಕರೆ ಮಾಡಿ, ಶಾಲೆ ಪ್ರಾರಂಭವಾದರೂ ಮಕ್ಕಳನ್ನು ಕರೆದುಕೊಂಡು ತವರಿಗೆ ಹೋದ ಮಡದಿ ಇನ್ನೂ ಬರಲಿಲ್ಲವಲ್ಲ ಎಂದು ಕರೆ ಮಾಡಿ ಬೈಯುತ್ತಿದ್ದ. ಮನೆ ಒಳಗಿದ್ದ ದೊಡ್ಡಪ್ಪ ಹನುಮಂತಯ್ಯ ಈತ ನನಗೇ ಬೈಯುತ್ತಿರುವುದಾಗಿ ತಪ್ಪಾಗಿ ಭಾವಿಸಿ ಏಕಾಏಕಿ ಚೂರಿಯಿಂದ ಯತೀಶನ ಎದೆಗೆ ಚೂರಿಯಿಂದ ಇರಿದಿದ್ದ.

ಇದನ್ನೂ ಓದಿ: ನೈತಿಕ ಪೊಲೀಸ್​ಗಿರಿ ಪ್ರಕರಣ: ಹಲ್ಲೆಗೊಳಗಾಗಿದ್ದ ಯುವಕನ ಸಹೋದರನಿಂದ ಪೊಲೀಸ್​ ಕಮಿಷನರ್​ಗೆ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.