ETV Bharat / state

ರಾಯಚೂರಿನಲ್ಲಿ ಅರಸು ಜಯಂತಿ ಸರಳ ಆಚರಣೆ - ರಾಯಚೂರು

ರಾಯಚೂರಿನಲ್ಲಿ ಕೊರೊನಾ ಭೀತಿಯ ನಡುವೆಯೇ ಸರಳವಾಗಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 105ನೇ ಜಯಂತಿಯನ್ನು ಆಚರಿಸಲಾಯಿತು.

ಡಿ.ದೇವರಾಜು ಅರಸು ಜಯಂತಿ ಸರಳ ಆಚರಣೆ
ಡಿ.ದೇವರಾಜು ಅರಸು ಜಯಂತಿ ಸರಳ ಆಚರಣೆ ಡಿ.ದೇವರಾಜು ಅರಸು ಜಯಂತಿ ಸರಳ ಆಚರಣೆ
author img

By

Published : Aug 20, 2020, 5:17 PM IST

ರಾಯಚೂರು: ಕೊರೊನಾ ಭೀತಿಯ ನಡುವೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 105ನೇ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಸರಳವಾಗಿ ಆಚರಿಸಲಾಯಿತು.

ನಗರದ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಡಿ.ದೇವರಾಜು ಅರಸು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್​ ನಿಖಂ, ಜಿ.ಪಂ ಸಿಇಓ ಲಕ್ಷ್ಮೀಕಾಂತ್​ ರೆಡ್ಡಿ, ಅಪರ ಜಿಲ್ಲಾಧಿಕಾರಿ ದುರಗೇಶ್, ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಬಿ.ನಾಯಕ ಹಾಗೂ ಹಿಂದುಳಿದ ವರ್ಗಗಳ ನಿಗಮದ ಉಪನಿರ್ದೇಕರು ಉಪಸ್ಥಿತರಿದ್ದರು.

ಪ್ರತಿಜ್ಞಾವಿಧಿ ಬೋಧನೆ
ಪ್ರತಿಜ್ಞಾವಿಧಿ ಬೋಧನೆ

ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗೆ ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧ-ಭಾವವಿಲ್ಲದೆ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುವಂತೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಅಲ್ಲದೇ, ವೈಯಕ್ತಿಕವಾಗಿಯಾಗಲೀ, ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಪ್ರತಿಜ್ಞೆ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಠಾಣೆಯ ಪಿಎಸ್ಐ ಮಂಜುನಾಥ್​ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.