ETV Bharat / state

ಒನಕೆ ಓಬವ್ವ ಜಯಂತಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಗೈರು: ದಲಿತ ಸಂಘಟನೆ ಮುಖಂಡರಿಂದ ಪ್ರತಿಭಟನೆ - ದಲಿತ ಸಂಘಟನೆ ಮುಖಂಡರು

Dalit organization leaders protest: ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಯಾವೊಬ್ಬ ಸಚಿವರು, ಶಾಸಕರು, ಅಧಿಕಾರಿಗಳು ಭಾಗವಹಿಸದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಲಿತ ಸಂಘಟನೆ ಪ್ರತಿಭಟನೆ ನಡೆಸಿದೆ.

Protest by Dalit organization leaders
ದಲಿತ ಸಂಘಟನೆ ಮುಖಂಡರಿಂದ ಪ್ರತಿಭಟನೆ
author img

By ETV Bharat Karnataka Team

Published : Nov 11, 2023, 1:27 PM IST

Updated : Nov 11, 2023, 6:31 PM IST

ದಲಿತ ಸಂಘಟನೆ ಮುಖಂಡರಿಂದ ಪ್ರತಿಭಟನೆ

ರಾಯಚೂರು: ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕಾಟಾಚಾರಕ್ಕೆ ಆಚರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಯಚೂರು ದಲಿತ ಸಂಘಟನೆ ಮುಖಂಡರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಸರ್ಕಾರ ಒನಕೆ ಓಬವ್ವ ಜಯಂತಿಯನ್ನು ಆಚರಣೆ ಮಾಡಲು ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಆಯಾ ಜಿಲ್ಲೆಗಳಲ್ಲಿ ಶಿಷ್ಟಾಚಾರದ ಪ್ರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಕನ್ನಡ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಿಷ್ಟಾಚಾರದ ಪ್ರಕಾರ ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ, ಶಾಸಕರು, ‌ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸಬೇಕಾಗಿತ್ತು. ಆದರೆ, ಯಾವೊಬ್ಬ ಸಚಿವರು, ಶಾಸಕರು, ಅಧಿಕಾರಿಗಳು ಭಾಗವಹಿಸದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಕಾರ್ಯಕ್ರಮ ಆಯೋಜಿಸಿದ ವೇದಿಕೆಯ ಮೇಲೆ ಧರಣಿ ನಡೆಸಿದರು.

invitation card
ಆಮಂತ್ರಣ ಪತ್ರಿಕೆ

ಸಂಬಂಧಿಸಿದ ಇಲಾಖೆಯಿಂದ ಸರ್ಕಾರಕ್ಕೆ ಶಿಷ್ಟಾಚಾರ ಆಹ್ವಾನ ಪತ್ರಿಕೆಯಲ್ಲಿ ಸಹ ಮಂತ್ರಿಗಳು, ಶಾಸಕರು, ಅಧಿಕಾರಿಗಳು ಹೆಸರು ನಮೂದಿಸಿ ಹಂಚಿಕೆ ಮಾಡಲಾಗಿದೆ. ಜಿಲ್ಲಾಧಿಕಾರಿ, ಎಸ್ಪಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಕೆಲ ಅಧಿಕಾರಿಗಳು ಬಿಟ್ಟರೆ ಕಾರ್ಯಕ್ರಮದಲ್ಲಿ ಆಗಮಿಸಿರಲಿಲ್ಲ. ಇದರಿಂದ ಕೆರಳಿದ ದಲಿತ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿ, ಅಧಿಕಾರಿಗಳ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಇದನ್ನೂ ಓದಿ: ಮೈಸೂರು: ಸಿಎಂ ನಿವಾಸದೆದುರು ಪ್ರತಿಭಟನೆಗೆ ಮುಂದಾದ ರೈತರು: ಹಲವರು ಪೊಲೀಸ್ ವಶಕ್ಕೆ

ಇನ್ನು ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ.ಆರ್. ದುರುಗೇಶ ಅವರು ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪ್ರಸ್ತುತ ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ತನ್ನ ಪ್ರಾಣವನ್ನೇ ತ್ಯಾಗ ಮಾಡಿರುವ ವೀರರಾಣಿ ಒನಕೆ ಓಬವ್ವ ಅವರ ವೀರ ಸಾಹಸವನ್ನು ಹಾಗೂ ಅವರ ಮಾನವೀಯ ಅಂಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಆಧುನಿಕ ದಿನಮಾನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿಯೂ ಮುಂದುವರೆಯುತ್ತಿರುವುದು ಅತ್ಯಂತ ಸಂತಸದ ಸಂಗತಿ. ಅವರು ಯಾವುದಕ್ಕೂ ಹೆದರದೇ ಜೀವನದಲ್ಲಿ ಧೈರ್ಯವಂತರಾಗಬೇಕು, ವೀರರಾಣಿ ಓಬವ್ವ ಅವರಂತೆ ವೀರತನವನ್ನು ಮೈಗೂಡಿಸಿಕೊಳ್ಳಬೇಕು. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಇದೇ ವೇಳೆ ರಾಯಚೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರ ವಿಭಾಗದ ಉಪನ್ಯಾಸಕ ಡಾ.ಮಲ್ಲೇಶ ಆರ್. ಚಲವಾದಿ ಅವರು ಒನಕೆ ಓಬವ್ವ ಅವರ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಇತರರಿದರು.

ಇದಕ್ಕೂ ಮುನ್ನ ಕಾಟಾಚಾರಕ್ಕೆ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಆರೋಪಿಸಿ ದಲಿತ ಸಂಘಟನೆ ಮುಖಂಡರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಎಡಿಸಿ ಅಲ್ಲಿದ್ದ ಮುಖಂಡರ ಮನವೊಲಿಸಿದರು. ಬಳಿಕ ಕಾರ್ಯಕ್ರಮ ನಡೆಯಿತು.

Last Updated : Nov 11, 2023, 6:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.