ETV Bharat / state

ತಿಮ್ಮಾಪುರ ಏತನೀರಾವರಿ ಯೋಜನೆಯಿಂದ 30 ಸಾವಿರ ಎಕರೆ ಜಮೀನಿಗೆ ನೀರು ಸಿಗಲಿದೆ: ಡಿಸಿಎಂ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಮಾತು ಕೊಟ್ಟಿತ್ತು. ಅಧಿಕಾರಕ್ಕೆ ಬಂದ ತಕ್ಷಣ ನುಡಿದಂತೆ ನಡೆದಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್​ ಹೇಳಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Dec 30, 2023, 7:52 PM IST

ಡಿಸಿಎಂ ಡಿ ಕೆ ಶಿವಕುಮಾರ್ ಭಾಷಣ

ರಾಯಚೂರು: "ತಿಮ್ಮಾಪುರ ಏತನೀರಾವರಿ ಯೋಜನೆ ಯಶಸ್ವಿಯಾಗಿದೆ. ಇದರಿಂದ ಸುಮಾರು 25 ರಿಂದ 30 ಸಾವಿರ ಎಕರೆ ಜಮೀನಿಗೆ ನೀರು ಸಿಗಲಿದ್ದು, ರೈತರಿಗೆ ಅನುಕೂಲವಾಗುತ್ತದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್​ ಹೇಳಿದರು. ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಸೇರಿದಂತೆ ಹಲವು ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಈ ಯೋಜನೆ ಸಂಬಂಧ ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಒಟ್ಟಿಗೆ ಸೇರಿ ಕೆಲಸ ಮಾಡಬೇಕಾಗಿದೆ. ಈ ಯೋಜನೆಯಿಂದ ಆಂಧ್ರಕ್ಕೂ ಹೆಚ್ಚು ಅನುಕೂಲವಾಗುತ್ತದೆ" ಎಂದರು.

"ತುಂಗಭದ್ರಾ ಅಣೆಕಟ್ಟೆಯಲ್ಲಿ ಹೂಳು ತುಂಬಿರುವ ಕಾರಣ, ಸುಮಾರು 30 ಟಿಎಂಸಿಗೂ ಹೆಚ್ಚು ನೀರು ರಾಜ್ಯಕ್ಕೆ ನಷ್ಟವಾಗುತ್ತಿದೆ. ಆದ ಕಾರಣ ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡಲು ಯೋಜನೆ ರೂಪಿಸುತ್ತಿದ್ದೇವೆ. ಸಮತೋಲಿತ ಅಣೆಕಟ್ಟಿನಿಂದ ಆಂಧ್ರಪ್ರದೇಶ, ನಮ್ಮ ರಾಜ್ಯದ ಒಂದಷ್ಟು ಹಳ್ಳಿಗಳು ಮುಳುಗಡೆಯಾಗುತ್ತವೆ. ಈ ವೇಳೆ ಜನರನ್ನು ಸ್ಥಳಾಂತರ ಮಾಡಬೇಕು. ಅವರಿಗೆ ಪರಿಹಾರ ನೀಡಬೇಕಾಗುತ್ತದೆ. ಸಮುದ್ರಕ್ಕೆ ವ್ಯರ್ಥವಾಗಿ ನೀರು ಹರಿಯುವುದನ್ನು ತಪ್ಪಿಸಲು ಮತ್ತು ರೈತರ ಹಿತದೃಷ್ಟಿಯಿಂದ ಈ ಯೋಜನೆಯ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ" ಎಂದು ಹೇಳಿದರು.

"ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಮಾತು ಕೊಟ್ಟಿತ್ತು. ಅಧಿಕಾರಕ್ಕೆ ಬಂದ ತಕ್ಷಣ ನುಡಿದಂತೆ ನಡೆದಿದ್ದೇವೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಯಾವುದೇ ಪಕ್ಷ ನಡೆದುಕೊಳ್ಳುವುದು ಕಷ್ಟದ ಕೆಲಸ. ಆದರೆ ನನ್ನ 40 ವರ್ಷಗಳ ರಾಜಕೀಯ ಜೀವನದ ಅನುಭವದ ಪ್ರಕಾರ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಈ ಹಿಂದಿನ ಬಿಜೆಪಿ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ" ಎಂದರು.

"ಕಾಂಗ್ರೆಸ್​ನ ನಾಲ್ಕು ಗ್ಯಾರಂಟಿಗಳು ಯಶಸ್ವಿಯಾಗಿ ಜನರನ್ನು ತಲುಪಿವೆ. ಐದನೇ ಗ್ಯಾರಂಟಿ ಯೋಜನೆ ಯುವನಿಧಿಯ ಹಣ ಜನವರಿ ತಿಂಗಳಿನಲ್ಲಿ ಯುವಕ- ಯುವತಿಯರ ಖಾತೆಗೆ ಜಮೆಯಾಗಲಿದೆ. ಬರಗಾಲದ ಸಮಯದಲ್ಲೂ ಜನರ ಬದುಕಿನಲ್ಲಿ ಬದಲಾವಣೆ ತರಬೇಕು ಎಂದು ಗ್ಯಾರಂಟಿ ಯೋಜನೆಗಳಿಗೆ ಸುಮಾರು 60 ಸಾವಿರ ಕೋಟಿಯಷ್ಟು ಹಣ ಖರ್ಚು ಮಾಡಲಾಗಿದೆ. ಸಿಂಧನೂರಿನ ರೈತರು ದೇಶಕ್ಕೆ ಮಾದರಿ ಹಾಗೂ ವೀರ ಸೈನಿಕರ ನಾಡು ಎಂದು ಹೆಸರುವಾಸಿಯಾಗಿದೆ. ಸಿಂಧನೂರಿನ ಯುವಶಕ್ತಿಯನ್ನು ನೋಡಿದರೆ ನಮ್ಮ ಸ್ಫೂರ್ತಿಯೂ ಹೆಚ್ಚಾಗುತ್ತದೆ. ರಾಯಚೂರು ಜಿಲ್ಲೆಗೆ ಸಿಂಧನೂರು ಮಾದರಿ ಕ್ಷೇತ್ರವಾಗಿದೆ" ಎಂದು ಬಣ್ಣಿಸಿದರು.

ಗ್ಯಾರಂಟಿಗಳ ಬಗ್ಗೆ ಕವನ ಹೇಳಿದ ಡಿಸಿಎಂ: "ಐದು ಬೆರಳು ಸೇರಿ ಒಂದು ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು, ಐದು ಗ್ಯಾರಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆಯ ಎಸೆದು ಹೋದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಸಮೃದ್ಧವಾಯಿತು, ಕರ್ನಾಟಕ ಪ್ರಬುದ್ಧವಾಯಿತು" ಎಂದು ಕವನ ಹೇಳಿ ಗಮನ ಸೆಳೆದರು.

ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ‌ ಕಾಣಿಕೆ, ಬರದಿಂದ ಬೇಸತ್ತ ರೈತರಿಗೆ ನೇಣಿನ ಕುಣಿಕೆ: ಆರ್ ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.