ರಾಯಚೂರು : ಕಾಂಗ್ರೆಸ್ ವಾರಸದಾರರು ಇಲ್ಲದ ಮನೆಯಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ. ಮಸ್ಕಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುತ್ತಾರೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ದೇಶದ 23 ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡು ವಾರಸುದಾರರಿಲ್ಲದ ಮನೆಯಂತಾಗಿದೆ ಎಂದರು.
ಬಾಬಾ ಜಗಜೀವರಾಮ್ ಅವರ 114ನೇ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಮಸ್ಕಿ ಕ್ಷೇತ್ರದಲ್ಲಿ ಇದೇ ತಿಂಗಳ ಏ.17ರಂದು ಮತದಾನವಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡರು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 3 ಲಕ್ಷ ಅಂತರದ ಮತಗಳಿಂದ ಗೆಲ್ಲುತ್ತೇವೆ. ಪ್ರಧಾನಿ ಮೋದಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ರಾಜ್ಯದಲ್ಲಿ ಬಿಎಸ್‌ವೈ ಉತ್ತಮ ಆಡಳಿತ ನೀಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಕಿಸಾನ್ ಸನ್ಮಾನ್ ಯೋಜನೆಯಲ್ಲಿ 10 ಸಾವಿರ ರೂ. ರೈತರ ಖಾತೆಗಳಿಗೆ ಹಾಕಿದ್ದೇವೆ. ಇಡೀ ಪ್ರಪಂಚದಲ್ಲಿ ಬಿಜೆಪಿ ಬಲಾಢ್ಯ ಪಕ್ಷವಾಗಲಿದೆ. ಸಿದ್ದರಾಮಯ್ಯನವರು ಬಿಎಸ್‌ವೈ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯಾಗಿ ಸಿದ್ದರಾಮಯ್ಯ ಮಾತನಾಡುವುದು ಶೋಭೆಯಲ್ಲ, ಹೀಗೆ ಹಗುರವಾಗಿ ಮಾತನಾಡಬಾರದು ಎಂದರು.
ಇದನ್ನೂ ಓದಿ: ಸಿಎಂ ಸ್ಥಾನ ಕಳ್ಕೊಂಡ ನಂತರ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ