ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ನಗರದ ಒಪೆಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ಸೋಂಕಿತೆ ಮೃತಪಟ್ಟಿದ್ದಾರೆ.
ಮಾನವಿ ತಾಲೂಕಿನ ಕುರ್ಡಿ ಗ್ರಾಮದ ವೃದ್ದೆಯು, ಎದೆನೋವು, ಹೈಬಿಪಿ, ಸಕ್ಕರೆ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಳು. ಜೂನ್ 30ರಂದು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ವೃದ್ದೆಯ ಗಂಟಲು ದ್ರವ್ಯ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು.
ಬಳಿಕ ವೃದ್ಧೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕೂಡಲೇ ಒಪೆಕ್‌ನ ಐಸೋಲೋಷನ್ ವಾರ್ಡ್‌ಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಕೋವಿಡ್-19 ಮಾರ್ಗ ಸೂಚಿ ಅನುಸಾರ ಶವಸಂಸ್ಕಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.