ರಾಯಚೂರು: ಅತ್ಯಾಚಾರದಂತಹ ದುಷ್ಕೃತ್ಯ ಎಸಗುವ ಕಾಮುಕರಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಸಿಂಧನೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಎನ್‌ಕೌಂಟರ್ ಕುರಿತು ಪ್ರತಿಕ್ರಿಯಿಸಿರು. ಅತ್ಯಾಚಾರ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ಇಲ್ಲ. ಆದ್ರೆ ಅವರಿಗೆ ಮರಣದಂಡನೆ ವಿಧಿಸಬೇಕು. ಇದನ್ನ ನಾನೊಬ್ಬ ಲಾಯರ್ ಆಗಿ ಹೇಳುತ್ತಿದ್ದೇನೆ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡುವಾಗ ಪೊಲೀಸರು ತಮ್ಮ ರಕ್ಷಣೆಗೆ ಎನ್‌ಕೌಂಟರ್ ಮಾಡುವುದಕ್ಕೆ ಅವಕಾಶವಿದೆ ಎಂದರು.
ಇನ್ನು ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಆಗ ಬಿಜೆಪಿ ಸರ್ಕಾರ ಪತನವಾಗಲಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ರು.
ಫಲಿತಾಂಶದ ಬಳಿಕ ಮೈತ್ರಿಯ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬಾರದೆಂದು ನಾನು ಎಲ್ಲೂ ಹೇಳಿಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಅಂತಾ ಸಿದ್ದರಾಮಯ್ಯ ತಿಳಿಸಿದರು.