ರಾಯಚೂರು: ಆಹಾರ ಧಾನ್ಯ ಸಂಗ್ರಹಣ ಘಟಕಕ್ಕೆ ಅಗಮಿಸುವ ಭಾರೀ ವಾಹನಗಳಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಜನ ಸೇನಾ ಯುವಕರ ಸಂಘದ ಜಿಲ್ಲಾಧ್ಯಕ್ಷ ಪರಶುರಾಮ ಒತ್ತಾಯಿಸಿದರು.
ನಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರ್ಡ್ ನಂ.2ರಲ್ಲಿ ಬರುವ ಭಾರತ ಆಹಾರ ಧಾನ್ಯ ಸಂಗ್ರಹಣ ಘಟಕಕ್ಕೆ ಆಗಮಿಸುವ ಆಹಾರ ತುಂಬಿದ ಭಾರೀ ಲಾರಿಗಳ ಸಂಚಾರದಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಇಕ್ಕಟ್ಟಾದ ರಸ್ತೆಯಲ್ಲಿ ವೇಗವಾಗಿ ಸಂಚರಿಸುವ ಲಾರಿಗಳಿಂದ ರಸ್ತೆ ಅಪಘಾತಗಳು ಸಂಭವಿಸಿವೆ.
ಘಟಕಕ್ಕೆ ಆಗಮಿಸುವ ಲಾರಿಗಳ ವೇಗ ನಿಯಂತ್ರಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವೂದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಘಟಕಕ್ಕೆ ಆಗಮಿಸುವ ಈ ಲಾರಿಗಳಿಗೆ ಪರ್ಯಾಯ ರಸ್ತೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.