ರಾಯಚೂರು: ವಿಶ್ವಕರ್ಮ ಸಮುದಾಯ ಮುಖಂಡರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಜಿಲ್ಲಾ ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸರ್ಕಾರ ವಿಶ್ವಕರ್ಮ ಸಮುದಾಯದ ಮುಖಂಡರೊಬ್ಬರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿದೆ. ಅದರ ಜತೆಗೆ ಸಮುದಾಯದ ಅಭಿವೃದ್ಧಿ ಹಿತದೃಷ್ಟಿಯಿಂದ ಸಚಿವ ಸ್ಥಾನವೊಂದನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಜನವರಿ 1ರಂದು ಅಮರಶಿಲ್ಪಿ ಜಕಣಾಚಾರಿ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟ ಹಾಗೂ ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಸಮುದಾಯದ ಜನರು ಜಯಂತಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.