ರಾಯಚೂರು: ಯಡಿಯೂರಪ್ಪನವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಜಿಲ್ಲೆಯ ಗೊಲ್ಲರ(ಯಾದವ್) ಸಮಾಜದವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಈ ಕುರಿತು ಸಮಾಜದ ರಾಯಚೂರು ಜಿಲ್ಲಾಧ್ಯಕ್ಷ ಕೆ ಹನುಮಂತಪ್ಪ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದ ಯಾದವ್ ಸಮಾಜದ ಅಭಿವೃದ್ಧಿಗೆ ಸಚಿವ ಸ್ಥಾನದ ಅವಶ್ಯಕತೆಯಿದೆ. ಆದ್ದರಿಂದ ನಮ್ಮ ಸಮಾಜದ ಪೂರ್ಣಿಮಾ ಏಕೈಕ ಶಾಸಕಿಯಾಗಿರುವುದರಿಂದ ಸಮಾಜಕ್ಕೆ ಪ್ರಾತಿನಿಧ್ಯ ನೀಡಲು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.