ETV Bharat / state

ರೈತರಿಗೆ ಬೀಜದ ಸಮಸ್ಯೆಯಾದ್ರೆ ಅಧಿಕಾರಿಗಳೇ ಹೊಣೆ.. ಡಿಸಿಎಂ ಲಕ್ಷ್ಮಣ ಸವದಿ ಎಚ್ಚರಿಕೆ - Deputy Chief Minister Laxmana Sawadi meeting

ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗಿದೆ. ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಅವರಿಗೆ ಯಾವುದೇ ರೀತಿ ಬೀಜದ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.

Deputy Chief Minister Laxmana Sawadi meeting
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಭೆ
author img

By

Published : Jun 23, 2020, 10:13 PM IST

ರಾಯಚೂರು : ಮುಂಗಾರು ಬಿತ್ತನೆಗಾಗಿ ರೈತರಿಗೆ ಬೀಜದ ಕೊರತೆ ಎದುರಾಗದಂತೆ ಕ್ರಮಕೈಗೊಳುವಂತೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗಿದೆ. ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಅವರಿಗೆ ಯಾವುದೇ ರೀತಿ ಬೀಜದ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಬೀಜದ ಸಮಸ್ಯೆ ಕಂಡು ಬಂದ್ರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ಕೊರೊನಾ ಸೋಂಕು ಪ್ರಾರಂಭದ ದಿನಗಳಲ್ಲಿ ರಾಯಚೂರು ಹಸಿರು ವಲಯದಲ್ಲಿತ್ತು. ಆದರೆ, ಇದೀಗ 431 ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಹೀಗಾಗಿ ಬರುವ ದಿನಗಳಲ್ಲಿ ಸಮುದಾಯಕ್ಕೆ ಸೋಂಕು ಹರಡದಂತೆ ಯೋಜನೆ ರೂಪಿಸಿ, ಕೊರೊನಾ ತಡೆಗೆ ಕೆಲಸ ಮಾಡಬೇಕಾಗಿದೆ ಎಂದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಭೆ

ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಪ್ರತಿಯೊಬ್ಬರಿಗೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವ ಮೂಲಕ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ರು.

ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಅದಷ್ಟು ಬೇಗ ಮುಗಿಸಿ. ಜನರಿಗೆ ನೀರು ಪೂರೈಕೆ ಮಾಡುವ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ಸಭೆಯಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಡಿ.ಎಸ್ ಹೂಲಗೇರಿ, ಕೆ.ಶಿವನಗೌಡ ನಾಯ್ಕ, ರಾಜಾ ವೆಂಕಟಪ್ಪ ನಾಯ್ಕ, ಸಂಸದರಾದ ಸಂಗಣ್ಣ ಕರಡಿ, ರಾಜಾ ಅಮರೇಶ್ವರ ನಾಯ್ಕ, ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಹಾಗೂ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.