ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕು ದೇವರಭೂಪುರ ಗ್ರಾಮದ ಜನರಲ್ಲಿ ವಾಂತಿ-ಭೇದಿ ಉಲ್ಬಣಗೊಂಡಿದ್ದು, ಜನತೆ ಆತಂಕಗೊಂಡಿದ್ದಾರೆ.
ಕಳೆದ ಮೂರು ದಿನಗಳಿಂದ ವಾಂತಿ-ಭೇದಿ ಪ್ರಕರಣ ಕಾಣಿಸಿಕೊಂಡಿದ್ದು, ಸ್ಥಳೀಯವಾಗಿ ಆರೋಗ್ಯ ಇಲಾಖೆ ಚಿಕಿತ್ಸೆ ನೀಡುವಲ್ಲಿ ವಿಫಲವಾಗಿದೆ. ಸಾಮಾನ್ಯ ಜನತೆ ಖಾಸಗಿ ಆಸ್ಪತ್ರೆಗಳಿಗೆ ತೆರಳಿದರು ಕೊರೊನಾ ಭೀತಿ ಮುಂದಿಟ್ಟುಕೊಂಡು ಚಿಕಿತ್ಸೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆ ಮತ್ತು ದೇವರಭೂಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಭಯಗೊಳ್ಳುವ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿಗೆ ವಾಂತಿ-ಭೇದಿ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದಾಗಿ ತಿಳಿಸಿದರು.