ETV Bharat / state

ಅನರ್ಹರ ಕುರಿತು ಸುಪ್ರೀಂ ತೀರ್ಪನ್ನ ಸ್ವಾಗತಿಸಿದ ಕೈ ನಾಯಕರು

ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಹೇಳಿದ್ದಾರೆ. ತೀರ್ಪಿನಿಂದಾಗಿ ಬಿಜೆಪಿ ಸರ್ಕಾರದ ಕುದುರೆ ವ್ಯಾಪಾರ ಬಯಲಾಗಿದೆ ಹಾಗೂ ನಮಗೆ ನೈತಿಕ ಗೆಲುವು ಸಿಕ್ಕಂತಾಗಿದೆ ಎಂದು ಹೇಳಿದರು.

author img

By

Published : Nov 13, 2019, 1:19 PM IST

ಕೆಪಿಸಿಸಿ ನಾಯಕರು

ರಾಯಚೂರು: ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಯಚೂರಿನ ಯರಮರಸ್ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ‌ದೋಹ್ರ ಮಾಡಿದ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಆದೇಶ ನೀಡಿದ್ರು. ಸ್ಪೀಕರ್ ನೀಡಿರುವ ಆದೇಶಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ನೈತಿಕ ಗೆಲುವು ಸಿಕ್ಕಿದೆ. ಹೀಗಾಗಿ ಬಿ.ಎಸ್.ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ

ಅಲ್ಲದೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆ ಈ ಸರ್ಕಾರಕ್ಕೆ ಅಧಿಕಾರ ನಡೆಸಲು ನೈತಿಕತೆ ಇಲ್ಲವಾಗಿರುವುದರಿಂದ ಸರ್ಕಾರ ಉಳಿಯುವುದಿಲ್ಲ. ಅಲ್ಲದೇ ಸ್ಪೀಕರ್ ತೆಗೆದುಕೊಂಡ ನಿರ್ಧಾರ ಸರಿ ಎಂಬುದನ್ನು ಸುಪ್ರೀಂ ಎತ್ತಿಹಿಡಿದಿದ್ದು, ರಾಜ್ಯದಲ್ಲಿ ಸರ್ಕಾರ ರಚನೆಗೆ ಕುದುರೆ ವ್ಯಾಪಾರ ನಡೆದಿರುವುದು ಸಾಬೀತಾಗಿದೆ ಎಂದರು.

ಶೀಘ್ರದಲ್ಲಿ ರಾಷ್ಟ್ರಪತಿ ಭೇಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ದೂರು ದಾಖಲಿಸಿ ಅಧಿಕಾರದಿಂದ ವಜಾಗೊಳಿಸುವಂತೆ ಒತ್ತಾಯ ಮಾಡಲು ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಜೊತೆಗೆ ಬಿಜೆಪಿಗೆ ನೈತಿಕತೆಯಿದ್ದರೆ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸಬಾರದು ಎಂದು ಹೇಳಿದ್ರು.

ಬಿಜೆಪಿಯ ಕುದುರೆ ವ್ಯಾಪಾರ ಬಯಲಾಗಿದೆ: ಖಂಡ್ರೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಸುದ್ದಿಗೋಷ್ಠಿ

ಸುಪ್ರೀಂ ಕೋರ್ಟ್ ತೀರ್ಪಿನಿಂದ ಬಿಜೆಪಿ ನಡೆಸಿದ್ದ ಕುದುರೆ ವ್ಯಾಪಾರ ಬಯಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರವಾಗಿ ನೀಡಿದ ಸುಪ್ರೀಂ ತೀರ್ಪಿನಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಕೇಂದ್ರ ಸರ್ಕಾರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಂದಾಗಬೇಕು. ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಮತದಾರರು ಬೆಂಬಲಿಸುವ ಮೂಲಕ‌ ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

Intro:ಸ್ಲಗ್: ದಿನೇಶ್ ಗುಂಡೂರಾವ್ ಹೇಳಿಕೆ
ಫಾರ್ಮೇಟ್: ಎವಿಬಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೩-೧೧-೨೦೧೯
ಸ್ಥಳ: ರಾಯಚೂರು

ಆಂಕರ್: ಅನರ್ಹ ಶಾಸಕರು ಕುರಿತು ಸುಪ್ರೀಕೋರ್ಟ್ ತೀರ್ಪುನ್ನು ಸ್ವಾಗತಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. Body:ರಾಯಚೂರಿನಲ್ಲಿ ಯರಮರಸ್ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ರು. ಪಕ್ಷಕ್ಕೆ ‌ದೋಹ್ರ ಮಾಡಿದ ಶಾಸಕರಿಗೆ ಅನರ್ಹಗೊಳಿಸುವ ಮೂಲಕ ಸ್ಪೀಕರ್ ಆದೇಶವನ್ನ ನೀಡಿದ್ರು. ಸ್ಪೀಕರ್ ನೀಡಿರುವ ಈ ತೀರ್ಪುನ್ನ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ನೈತಿಕ ಗೆಲುವು ಸಿಕ್ಕಿದೆ.  ಹೀಗಾಗಿ ಬಿ.ಎಸ್.ಯಡಿಯೂರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ರು. ಅಲ್ಲದೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆ ಈ ಸರಕಾರಕ್ಕೆ ಅಧಿಕಾರ ನಡೆಸಲು ನೈತಿಕತೆಯಿಲ್ಲ‌ವಾಗಿರುವುದರಿಂದ ಸರಕಾರ ಉಳಿಯುವುದಿಲ್ಲ.  ಅಲ್ಲದೇ   ಸ್ಪೀಕರ್ ತೆಗೆದುಕೊಂಡ ನಿರ್ಧಾರ  ಸರಿ ಎಂಬು ದನ್ನು ತೀರ್ಪು ಬಯಲು ಗೊಳಿಸಿದ್ದು, ರಾಜ್ಯದಲ್ಲಿ ಸರಕಾರ ರಚನೆಗೆ ಕುದುರೆ ವ್ಯಾಪಾರ ನಡೆದಿರುವುದು ಸಾಬೀತಾಗಿದೆ.
ಶೀಘ್ರ ರಾಷ್ಟ್ರಪತಿ ಭೇಟಿ ಮಾಡಿ ರಾಜ್ಯ ಸರಕಾರದ ವಿರುದ್ಧ ದೂರು. ಅಧಿಕಾರದಿಂದ ವಜಾ ಗೊಳಿಸಲು ಒತ್ತಾಯ ಮಾಡಲು ಪಕ್ಷದಲ್ಲಿ ತಿರ್ಮಾನ ಕೈಗೊಳ್ಳಲಾಗುತ್ತದೆ ಜತೆಗೆ
ಬಿಜೆಪಿಗೆ ನೈತಿಕತೆಯಿದ್ದರೆ  ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸಬಾರದು ಎಂದು ಹೇಳಿದ್ರು.
Conclusion:ಬೈಟ್.೧: ದಿನೇಶ್ ಗೂಂಡರಾವ್, ಕೆಪಿಸಿಸಿ ಅಧ್ಯಕ್ಷ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.