ETV Bharat / state

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು: ಸಂತ್ರಸ್ತರಿಗೆ ಆಹಾರದ ಪೊಟ್ಟಣ ವಿತರಣೆ - ರಾಯಚೂರು ಸುದ್ದಿ

ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿದ್ದು, ಬಡಾವಣೆಗಳಲ್ಲಿನ ಜನರಿಗೆ ಸ್ಥಳೀಯರು ಹಾಗೂ ಜಿಲ್ಲಾಡಳಿತದ ವತಿಯಿಂದ ಆಹಾರದ ಪೊಟ್ಟಣಗಳನ್ನು ವಿತರಿಸಲಾಯಿತು.

Distribution of food packets to people in the lowlands
ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು: ಸಂತ್ರಸ್ತರಿಗೆ ಆಹಾರದ ಪೊಟ್ಟಣ ವಿತರಣೆ
author img

By

Published : Sep 26, 2020, 10:13 PM IST

ರಾಯಚೂರು: ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿದ್ದು, ಬಡಾವಣೆಗಳಲ್ಲಿನ ಜನರಿಗೆ ಸ್ಥಳೀಯರು ಹಾಗೂ ಜಿಲ್ಲಾಡಳಿತದ ವತಿಯಿಂದ ಆಹಾರದ ಪೊಟ್ಟಣಗಳನ್ನು ವಿತರಿಸಲಾಯಿತು.

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು: ಸಂತ್ರಸ್ತರಿಗೆ ಆಹಾರದ ಪೊಟ್ಟಣ ವಿತರಣೆ

ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಾದ ಸೀಯಾತಲಾಬ, ಕಾಕಿನ ಕೆರೆ, ಬಸವನಭಾವಿ ವೃತ್ತ, ಸುಖಾನಿ ಕಾಲೋನಿ, ನೀರಭಾವಿ ಕುಂಟೆ ಸೇರಿದಂತೆ ಹತ್ತಕ್ಕೂ ಅಧಿಕ ಬಡಾವಣೆಗಳಲ್ಲಿನ ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳಲ್ಲಿ ಮೂರು ಅಡಿಯಷ್ಟು ನೀರು ತುಂಬಿದ್ದು, ದವಸ-ಧಾನ್ಯಗಳು ಸೇರಿದಂತೆ ಮನೆಯಲ್ಲಿರುವ ಎಲ್ಲಾ ವಸ್ತುಗಳು ಹಾಳಾಗಿವೆ.

ಮಳೆಯಿಂದ ತೀವ್ರ ತೊಂದರೆಗೊಳಾದವರಿಗೆ ಸ್ಥಳೀಯ ಕಲ್ಯಾಣ ಮಂಟಪ, ಶಾಲೆಗಳು ಸೇರಿದಂತೆ ವಿವಿಧೆಡೆ ವಸತಿ ವ್ಯವಸ್ಥೆ ಮಾಡಲಾಗಿದ್ದು, ಆಹಾರದ ಪೊಟ್ಟಣಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.