ETV Bharat / state

ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಗೆ ಕಳಪೆ ಮಟ್ಟದ ಪಡಿತರ ವಿತರಣೆ ಆರೋಪ - ಹಟ್ಟಿ ಚಿನ್ನದ ಗಣಿ

ಕಾರ್ಮಿಕರಿಗೆ 7 ಕೆಜಿ ಉಚಿತ ಪಡಿತರ ಅಕ್ಕಿ, 2 ಕೆಜಿ ತೊಗರಿ ಬೇಳೆ, 1 ಕೆಜಿ ಸಕ್ಕರೆ ಹಾಗೂ ಅಡುಗೆ ಎಣ್ಣಿ ವಿತರಣೆ ಮಾಡಲಾಗುತ್ತದೆ. ಕಳಪೆ ಗುಣಮಟ್ಟದ ಪದಾರ್ಥಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

distribution-of-poor-rations-to-hatti-gold-mine-labors
ಹಟ್ಟಿ ಚಿನ್ನದ ಗಣಿ
author img

By

Published : Feb 9, 2021, 1:27 AM IST

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಗೆ ನೀಡುತ್ತಿದ್ದ ಪಡಿತರದಲ್ಲಿ ಕಳಪೆ ಗುಣಮಟ್ಟ ಕಂಡು ಬಂದ ಹಿನ್ನೆಲೆ ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿ ಅಧ್ಯಕ್ಷ ಮಾನಪ್ಪ ವಜ್ಜಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಾರ್ಮಿಕರಿಗೆ 7 ಕೆಜಿ ಉಚಿತ ಪಡಿತರ ಅಕ್ಕಿ, 2 ಕೆಜಿ ತೊಗರಿ ಬೇಳೆ, 1 ಕೆಜಿ ಸಕ್ಕರೆ ಹಾಗೂ ಅಡುಗೆ ಎಣ್ಣಿ ವಿತರಣೆ ಮಾಡಲಾಗುತ್ತದೆ. ಕಳಪೆ ಗುಣಮಟ್ಟದ ಪದಾರ್ಥಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಗೆ ಕಳಪೆ ಮಟ್ಟದ ಪಡಿತರ ವಿತರಣೆ

ಗಣಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಗುಣಮಟ್ಟದ ಜೊತೆಗೆ ಪೌಷ್ಠಿಕ ಪಡಿತರ ವಿತರಣೆ ಮಾಡಬೇಕು. ಈಗಿರುವ ದಾಸ್ತಾನು ಹಿಂದಕ್ಕೆ ಕಳುಹಿಸಿ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಕಾರ್ಮಿಕರ ರಕ್ಷಣೆ ಮಾಡುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದೀರಿ. ಪಡಿತರ ಸೇರಿದಂತೆ ಆಡಳಿತಾತ್ಮಕವಾಗಿ ನ್ಯಾಯ ಒದಗಿಸುತ್ತಿಲ್ಲ. ಮುಂದೆ ಇಂತಹ ಧೋರಣೆ ಕಂಡು ಬಂದಲ್ಲಿ ಶಿಸ್ತು ಕ್ರಮಕ್ಕೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.